ADVERTISEMENT

ಜೆನ್‌–ಜಿ ತಲೆಮಾರಿನ ಕಥೆ ‘ಇಂದಿರಾ’

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 22:53 IST
Last Updated 25 ಜನವರಿ 2026, 22:53 IST
ಚಿತ್ರದ ಪೋಸ್ಟರ್‌
ಚಿತ್ರದ ಪೋಸ್ಟರ್‌   

ಇಂದಿನ ಜೆನ್‌–ಜಿ ತಲೆಮಾರಿನ ಕುರಿತಾದ ಕಥೆಯನ್ನು ಹೊಂದಿರುವ ‘ಇಂದಿರಾ’ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಇತ್ತೀಚೆಗಷ್ಟೇ ನಡೆಯಿತು. ‘ಜೆನ್‌–ಜಿ’ ಎಂಬ ಅಡಿಬರಹ ಹೊಂದಿರುವ ಚಿತ್ರಕ್ಕೆ ವೇದ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. 

‘ಈಗ ಎಲ್ಲರ ಅಂಗೈಯಲ್ಲಿಯೂ ಸ್ಮಾರ್ಟ್‌ ಪೋನ್‌ಗಳು, ಇಂಟರ್‌ನೆಟ್‌ ಸಂಪರ್ಕ ಲಭ್ಯವಿದ್ದರೂ, ಅದನ್ನು ಅತಿಯಾಗಿ ಬಳಸಿಕೊಳ್ಳುತ್ತಿರುವುದು ಮಾತ್ರ ಇಂದಿನ ಯುವ ತಲೆಮಾರು. ತಂತ್ರಜ್ಞಾನವನ್ನು ಹೇಗೆಲ್ಲ ಬಳಸಿಕೊಳ್ಳುತ್ತಿದೆ? ಹೇಗೆಲ್ಲ ಬಳಸಿಕೊಳ್ಳಬಹುದು ಎಂಬ ಕಥೆಯನ್ನು ಹೊಂದಿರುವ ಚಿತ್ರವಿದು. ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾವಾಗಿದ್ದು, ಆ ಕಾರಣದಿಂದಲೇ ‘ಇಂದಿರಾ’ ಎಂದು ಹೆಸರಿಟ್ಟಿದ್ದೇವೆ. ಸಿನಿಮಾದಲ್ಲಿ ಮನರಂಜನೆಯ ಜೊತೆಗೆ ಸಮಾಜಕ್ಕೆ ಒಂದು ಸಂದೇಶ ಕೂಡ ಇರಲಿದೆ’ ಎಂದರು ನಿರ್ದೇಶಕ. 

ಕಿರಣ್ ಕುಮಾರ್ ಎಂ. ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಮಾರ್ಚ್‌ನಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಇದೇ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ. ಚಿತ್ರಕ್ಕೆ ರವಿವರ್ಮ ಛಾಯಾಚಿತ್ರಗ್ರಹಣ, ಧನುಶ್‌ ಸಂಕಲನವಿರಲಿದೆ. ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ಕರ್ನಾಟಕ ಪ್ರಮುಖ ತಾಣಗಳು ಮತ್ತು ಹೊರರಾಜ್ಯಗಳಲ್ಲೂ ಚಿತ್ರೀಕರಣ ನಡೆಸಲು ತಂಡ ಯೋಜಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.