ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋ ಅನಾವರಣ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ರೇಖಾ ಗುಪ್ತಾ ಅವರು, 'ದೆಹಲಿಯನ್ನು ಕಲೆ ಮತ್ತು ಸಂಸ್ಕೃತಿಯ ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ಸಲುವಾಗಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಮಾಡಲಾಗುತ್ತಿದೆ.
ಮಾರ್ಚ್. 25ರಿಂದ 31ವರೆಗೆ ಈ ಚಲನಚಿತ್ರೋತ್ಸವ ನಡೆಯಲಿದೆ. ದೆಹಲಿಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೇಶ– ವಿದೇಶಗಳಿಂದ ಸುಮಾರು 125ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ' ಎಂದು ತಿಳಿಸಿದ್ದಾರೆ.
‘ಈ ಚಲನಚಿತ್ರೋತ್ಸವ ಸಿನಿಮಾ ತಾರೆಯರಿಗೆ ಮಾತ್ರವಲ್ಲದೆ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಈ ಚಲನಚಿತ್ರೋತ್ಸವದಲ್ಲಿ ಉದಯೋನ್ಮುಖ ಪ್ರತಿಭೆಗಳಿಗೆ, ಕಲೆ, ಸಾಹಿತ್ಯ, ಉತ್ತಮ ನಿರ್ದೇಶಕ, ಕಲಾವಿದರನ್ನು ಗುರುತಿಸಲು ಒಳ್ಳೆಯ ವೇದಿಕೆಯಾಗಿದೆ’ ಎಂದಿದ್ದಾರೆ.
ಚಲನಚಿತ್ರೋತ್ಸವವು ದೆಹಲಿಯ ಭಾರತ್ ಮಂಡಪಂ ಸೇರಿದಂತೆ ನಗರದ ಬೇರೆ ಬೇರೆ ಸ್ಥಳಗಳಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.