ADVERTISEMENT

 ಹುಬ್ಬಳ್ಳಿ–ಧಾರವಾಡದಲ್ಲಿ ಮೇ 21ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 15:48 IST
Last Updated 9 ಮಾರ್ಚ್ 2021, 15:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಹುಬ್ಬಳ್ಳಿ:‌ ನವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದಲ್ಲಿ ಮೇ 31ರಿಂದ ಮೂರು ದಿನ ಹುಬ್ಬಳ್ಳಿ–ಧಾರವಾಡದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಕಿರುಚಿತ್ರಗಳ ಸ್ಪರ್ಧೆ ಹಮ್ಮಿಕೊಂಡಿದೆ ಎಂದು ನಿರ್ಮಾಪಕ ಸಾ.ರಾ.ಗೋವಿಂದು ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘‌121 ಸಿನಿಮಾಗಳ ಪ್ರದರ್ಶನ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿಯೂ ಸಿನಿಮಾ ಉತ್ಸವಗಳು ನಡೆಯಬೇಕು. ವಾಣಿಜ್ಯ ಮಂಡಳಿ ಸಹಕಾರ ನೀಡುತ್ತದೆ’ ಎಂದರು.

ಚಲನಚಿತ್ರೋತ್ಸವದ ಉಸ್ತುವಾರಿ ಅಲ್ತಾಫ್‌ ಜಹಾಂಗೀರ್‌ ಮಾತನಾಡಿ ‘ಕನ್ನಡ, ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಗಳ ಸಿನಿಮಾ ಪ್ರದರ್ಶಿಸಲಾಗುವುದು. ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಚಲನಚಿತ್ರೋತ್ಸವಕ್ಕೆ ಇದು ಪರ್ಯಾಯವಲ್ಲ. ನಾವು ಯಾರೊಂದಿಗೂ ಸ್ಪರ್ಧೆ ಮಾಡುತ್ತಿಲ್ಲ. ಈ ಭಾಗವನ್ನು ಸಿನಿಮಾ ಹಬ್‌ ಮಾಡುವ ಉದ್ದೇಶದಿಂದ ಮೊದಲ ಬಾರಿಗೆ ಚಿತ್ರೋತ್ಸವ ಮಾಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.