ADVERTISEMENT

ಜವಾನ್ ಚಿತ್ರದ ಪೋಸ್ಟರ್ ಬಿಡುಗಡೆ; ನಟಿ ನಯನತಾರಾ ಪಾತ್ರದ ಬಗ್ಗೆ ಶಾರುಖ್ ಮೆಚ್ಚುಗೆ

ಪಿಟಿಐ
Published 17 ಜುಲೈ 2023, 12:28 IST
Last Updated 17 ಜುಲೈ 2023, 12:28 IST
ಶಾರುಖ್ ಖಾನ್
ಶಾರುಖ್ ಖಾನ್   

ಮುಂಬೈ: ಬಿಡುಗಡೆಗೆ ಸಿದ್ಧವಾಗಿರುವ ತಮ್ಮ ಮುಂದಿನ ಸಿನಿಮಾ 'ಜವಾನ್‌' ಪೋಸ್ಟರ್ ಬಿಡುಗಡೆ ಮಾಡಿರುವ ನಟ ಶಾರುಖ್‌ ಖಾನ್ ಅವರು ನಟಿ ನಯನತಾರಾ ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಶಾರಾಖ್‌ ಖಾನ್‌ ‘ಜವಾನ್‘ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ನಯನತಾರಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಹಾಡಿದ್ದಾರೆ. ‘ಚಂಡಮಾರುತಕ್ಕಿಂತ ಮೊದಲು ಬರುವ ಗುಡುಗು‘ ಎಂದು ಆಕೆಯ ಪಾತ್ರದ ಬಗ್ಗೆ ಹೊಗಳಿದ್ದಾರೆ.

ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್‘ ಅನ್ನು ಅಟ್ಲೀ ನಿರ್ದೇಶನ ಮಾಡಿದ್ದು, ಗೌರಿ ಖಾನ್‌ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್‌ ಕಥಾಹಂದರವನ್ನು ಹೊಂದಿದೆ. ಚಿತ್ರತಂಡವು, ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಸರಿಪಡಿಸಲು ಹೊರಡುವ, ವ್ಯಕ್ತಿಯ ಭಾವನಾತ್ಮಕ ಸನ್ನಿವೇಶಗಳನ್ನು ತೆರೆ ಮೇಲೆ ತರುವ ಪ್ರಯತ್ನ ನಡೆಸಿದೆ.

ADVERTISEMENT

ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಜವಾನ್‘ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ತೆರೆ ಮೇಲೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.