ADVERTISEMENT

ಹಣ ಅಕ್ರಮ ವರ್ಗಾವಣೆ: ಇ.ಡಿಯಿಂದ ಜಾಕ್ವೆಲಿನ್‌ ಫರ್ನಾಂಡಿಸ್‌ ವಿಚಾರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2021, 7:01 IST
Last Updated 8 ಡಿಸೆಂಬರ್ 2021, 7:01 IST
ನಟಿ ಜಾಕ್ವೆಲಿನ್ ಫರ್ನಾಂಡಿಸ್
ನಟಿ ಜಾಕ್ವೆಲಿನ್ ಫರ್ನಾಂಡಿಸ್    

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ದೆಹಲಿಯ ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ಬುಧವಾರ ವಿಚಾರಣೆಗೆ ಹಾಜರಾದರು.

₹200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ ಹೆಸರು ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದೆ.

ಜಾಕ್ವೆಲಿನ್‌ ಮೇಲೆ ಭಾನುವಾರದಿಂದ ಲುಕ್ ಔಟ್ ನೊಟೀಸ್ ಸಹ ಜಾರಿಯಾಗಿದೆ.

ADVERTISEMENT

ಕಿಚ್ಚ ಸುದೀಪ್‌ ಅಭಿನಯದ ಕನ್ನಡದ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.