ನವದೆಹಲಿ:ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ದೆಹಲಿಯ ಜಾರಿ ನಿರ್ದೇಶನಾಲಯದಕಚೇರಿಯಲ್ಲಿ(ಇ.ಡಿ) ಗುರುವಾರವೂ ವಿಚಾರಣೆಗೆಹಾಜರಾದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಅವರ ವಿಚಾರಣೆಯನ್ನು ಇ.ಡಿ ಮುಂದುವರಿಸಿದೆ.
ಬುಧವಾರ ಇ.ಡಿವಿಚಾರಣೆಗೆ ಹಾಜರಾಗಿದ್ದ ಜಾಕ್ವೆಲಿನ್ ಅವರನ್ನು ಸತತ 6 ಗಂಟೆಗಳ ಕಾಲ ಪ್ರಶ್ನೆ ಮಾಡಲಾಗಿತ್ತು.
₹200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಿದೆ.
ಹೊರದೇಶಗಳಿಗೆ ತೆರಳದಂತೆ ಜಾಕ್ವೆಲಿನ್ ಮೇಲೆ ಲುಕ್ ಔಟ್ ನೋಟಿಸ್ ಸಹ ಜಾರಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.