ADVERTISEMENT

ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜನವರಿ 2022, 12:23 IST
Last Updated 4 ಜನವರಿ 2022, 12:23 IST
ಜಾಕ್ವೆಲಿನ್ ಫೆರ್ನಾಂಡಿಸ್ ಮತ್ತು ಕಿಮ್‌ ಫೆರ್ನಾಂಡಿಸ್ (ಇನ್‌ಸ್ಟಾಗ್ರಾಂ ಚಿತ್ರ)
ಜಾಕ್ವೆಲಿನ್ ಫೆರ್ನಾಂಡಿಸ್ ಮತ್ತು ಕಿಮ್‌ ಫೆರ್ನಾಂಡಿಸ್ (ಇನ್‌ಸ್ಟಾಗ್ರಾಂ ಚಿತ್ರ)   

ಮುಂಬೈ:ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ತಾಯಿ ಕಿಮ್‌ಫೆರ್ನಾಂಡಿಸ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಕಿಮ್ ಅವರು ಬಹ್ರೇನ್‌ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿಗೆ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ದೆಹಲಿಯ ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ವಿಚಾರಣೆಗೆ ಹಾಜರಾಗಿದ್ದರು.

₹200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ ಹೆಸರು ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಹಲವು ಬಾರಿ ಅವರ ವಿಚಾರಣೆ ನಡೆಸಿದೆ.

ADVERTISEMENT

ಸದ್ಯಜಾಕ್ವೆಲಿನ್‌ ವಿರುದ್ಧ ಇ.ಡಿ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ.

ನಟ ಅಕ್ಷಯ್ ಕುಮಾರ್ ಅಭಿನಯದ'ರಾಮ್ ಸೇತು'ಚಿತ್ರದಲ್ಲಿಜಾಕ್ವೆಲಿನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಿಚ್ಚ ಸುದೀಪ್‌ ಅಭಿನಯದ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್‌ ಅವರ ಪಾತ್ರದ ಫಸ್ಟ್‌ಲುಕ್‌ ಸಹ ಬಿಡುಗಡೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.