ಜೈ ಸಿನಿಮಾ
ಚಿತ್ರ: ಇನ್‌ಸ್ಟಾಗ್ರಾಂ
ಬಿಗ್‌ಬಾಸ್ 9ನೇ ಸೀಸನ್ ವಿಜೇತರಾಗಿರುವ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಎಂಟ್ರಿ ಕೊಡಲಿದೆ. ಈ ಬಗ್ಗೆ ಜೀ5 ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
ತುಳು ಮತ್ತು ಕನ್ನಡ ಭಾಷೆಯಲ್ಲಿ ವಿಶ್ವದಾದ್ಯಂತ ತೆರೆಕಂಡಿದ್ದ ಜೈ ಸಿನಿಮಾ ಜೀ5 ನಲ್ಲಿ ತೆರೆ ಕಾಣಲಿದೆ. ಈ ಕುರಿತು ಜೀ5 ಇನ್‌ಸ್ಟಾಗ್ರಾಂನಲ್ಲಿ ಪೋಸ್ಟರ್ ಹಂಚಿಕೊಳ್ಳುವುದರ ಜೊತೆಗೆ ‘ತುಳು–ಕನ್ನಡ ಭಾಷೆಯಲ್ಲಿ ಬರುತ್ತಿದೆ ‘ಜೈ’ ಶೀಘ್ರದಲ್ಲೇ ನಿಮ್ಮ ಕನ್ನಡ ಜೀ5ನಲ್ಲಿ’ ಎಂದು ಬರೆದುಕೊಂಡಿದೆ.
ತುಳು ಮತ್ತು ಕನ್ನಡದಲ್ಲಿ ರೂಪುಗೊಂಡಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಜೈ ಸಿನಿಮಾ ಬಿಡುಗಡೆಗೂ ಮುನ್ನ ಮೊದಲ ₹501 ರೂಪಾಯಿ ಕೊಟ್ಟು ಟಿಕೆಟ್ ಖರೀದಿಸುವ ಮೂಲಕ ಕಿಚ್ಚ ಸುದೀಪ್ ಅವರು ಸಾಥ್ ನೀಡಿದ್ದರು.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಸಿನಿಮಾ ನಿರ್ಮಿಸಿದ್ದಾರೆ. ಜೈ ಸಿನಿಮಾ ಆರ್. ಎಸ್. ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿದೆ. ಜೈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.