ADVERTISEMENT

ರೂಪೇಶ್ ನಟನೆಯ ‘ಜೈ‘ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿರುವ ನಟ ಸುನೀಲ್ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2025, 7:12 IST
Last Updated 7 ನವೆಂಬರ್ 2025, 7:12 IST
<div class="paragraphs"><p>ಚಿತ್ರ ಕೃಪೆ:&nbsp;<strong><a href="https://www.instagram.com/roopesh_shetty_official/">roopesh_shetty_official</a></strong></p></div>

ಚಿತ್ರ ಕೃಪೆ: roopesh_shetty_official

   

ಕನ್ನಡ ಬಿಗ್‌ಬಾಸ್ ಸೀಸನ್ 9ರ ವಿಜೇತ, ನಟ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಜೈ‘ ಚಿತ್ರದ ಟ್ರೇಲರ್ ಇಂದು (ಶುಕ್ರವಾರ) ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರಿನ ಮಂತ್ರಿಮಾಲ್‌ನಲ್ಲಿ 6.30ಕ್ಕೆ ಈ ಚಿತ್ರದ ಟ್ರೇಲರ್ ಅನ್ನು ಅನಾವರಣಗೊಳಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗೋಡಿ, ಮಂಜುನಾಥ ಅತ್ತಾವರ, ದೀಕ್ಷಿತ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ADVERTISEMENT

ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ನಟಿ ಅದ್ವಿತಿ ಶೆಟ್ಟಿ ತೆರೆಹಂಚಿಕೊಂಡಿದ್ದಾರೆ. ಕರಾವಳಿಯಿಂದಲೇ ಬಂದಿರುವ ಅದ್ವಿತಿಗೆ ಈ ಚಿತ್ರ ಮೊದಲ ತುಳು ಸಿನಿಮಾವಾಗಿದೆ. ಪತ್ರಕರ್ತೆಯಾಗಿ ಅದ್ವಿತಿ ಶೆಟ್ಟಿ ನಟಿಸಿದ್ದಾರೆ.

ರಜತ್ ಹೆಗ್ಡೆ ಬರೆದಿರೋ ‘ಲವ್’ ಎಂಬ ಹಾಡಿಗೆ ತುಳುವಿನಲ್ಲಿ ರೂಪೇಶ್ ಶೆಟ್ಟಿ ಅವರೇ ಸಾಹಿತ್ಯ ಬರೆದಿದ್ದು, ಕನ್ನಡದಲ್ಲಿ ಕೀರ್ತನ್ ಭಂಡಾರಿ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.