ತಮಿಳು ನಟರಜನಿಕಾಂತ್ ಅಭಿನಯಿಸುತ್ತಿರುವ ‘ಜೈಲರ್‘ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.
71ರ ಹರೆಯದ ರಜನಿಕಾಂತ್ ಅವರು ಜೈಲರ್ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಈ ಪೋಸ್ಟರ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಾವಿರಾರು ಜನರು ಪೋಸ್ಟರ್ ಹಂಚಿಕೊಂಡು ‘ನಮ್ಮ ತಲೈವಾ‘ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಈ ಸಿನಿಮಾವನ್ನು‘ಸನ್ ಪಿಕ್ಚರ್ಸ್’ ನಿರ್ಮಾಣ ಮಾಡುತ್ತಿದೆ.ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ.
ಈ ಚಿತ್ರದ ಶೂಟಿಂಗ್ ಹೈದರಾಬಾದ್ನಲ್ಲಿನಡೆಯಲಿದೆ. ಇದಕ್ಕಾಗಿ ಬೃಹತ್ ಸೆಟ್ಗಳನ್ನುಹಾಕಲಾಗಿದ್ದು, ಇಂದಿನಿಂದ ಚಿತ್ರೀಕರಣ ಆರಂಭವಾಗಿದೆ ಎಂದು ಚಿತ್ರತಂಡ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.