ADVERTISEMENT

ಮಾರ್ಚ್‌ 1ರಂದು ಅಪ್ಪುವಿನ ’ಜೇಮ್ಸ್‌’ ಚಿತ್ರದ ವಿಡಿಯೊ ಸಾಂಗ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2022, 8:44 IST
Last Updated 26 ಫೆಬ್ರುವರಿ 2022, 8:44 IST
ಪೋಸ್ಟರ್‌
ಪೋಸ್ಟರ್‌   

ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ ಚಿತ್ರ ‘ಜೇಮ್ಸ್‌’ನ ಲಿರಿಕಲ್‌ ವಿಡಿಯೊ ಹಾಡು ಮಾರ್ಚ್‌ 1ರಂದು ಬಿಡುಡಗೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಚೇತನ್‌ ಕುಮಾರ್‌ ನಿರ್ದೇಶನದ ಈ ಪ್ಯಾನ್‌ ಇಂಡಿಯಾ ಸಿನಿಮಾ ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದೇ(ಮಾ.17)ತೆರೆಕಾಣಲಿದೆ. ನೆಚ್ಚಿನ ‘ಅಪ್ಪು’ವಿನ ಆ್ಯಕ್ಷನ್ ದೃಶ್ಯಗಳನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಲಿರಿಕಲ್‌ ವಿಡಿಯೊ ಹಾಡು ಬಿಡುಗಡೆಯಾಗುತ್ತಿರುವುದಕ್ಕೆ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಈಗಾಗಲೇ ಚಿತ್ರದ ಟೀಸರ್‌ ಬಿಡುಗಡೆಯಾಗಿ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರವು ಮಾಫಿಯಾ ಕಥೆಯನ್ನು ಹೊಂದಿದೆ. ಜೆ–ವಿಂಗ್‌ ಎಂಬ ಸೆಕ್ಯುರಿಟಿ ಏಜೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾತ್ರದಲ್ಲಿ ಪವರ್‌ಸ್ಟಾರ್‌ ಪುನೀತ್‌ ಅವರು ಪವರ್‌ಫುಲ್‌ ಆಗಿ ಕಾಣಿಸಿಕೊಂಡಿದ್ದಾರೆ.

ADVERTISEMENT

ಚಿತ್ರದ ಡಬ್ಬಿಂಗ್‌ ಪೂರ್ಣಗೊಳ್ಳುವ ಮೊದಲೇ ಪುನೀತ್‌ ಅವರು ನಿಧನರಾದ ಕಾರಣ, ಪುನೀತ್‌ ಅವರ ಪಾತ್ರಕ್ಕೆ ನಟ ಶಿವರಾಜ್‌ಕುಮಾರ್‌ ಧ್ವನಿ ನೀಡಿದ್ದಾರೆ

ಕನ್ನಡ ಸೇರಿದಂತೆ ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಚಿತ್ರವು ತೆರೆಕಾಣಲಿದೆ. ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಪುನೀತ್‌ ರಾಜ್‌ಕುಮಾರ್‌ ಅವರನ್ನು ಒಂದೇ ಸಿನಿಮಾದಲ್ಲಿ ನೋಡುವ ಅಭಿಮಾನಿಗಳ ಆಸೆ ‘ಜೇಮ್ಸ್‌’ ಮೂಲಕ ಈಡೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.