

ಚೆನ್ನೈ: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡಲು ಚಲನಚಿತ್ರ ಸೆನ್ಸಾರ್ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶನ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಮನೀಂದ್ರ ಮೋಹನ್ ಶ್ರೀವಾತ್ಸವ ಮತ್ತು ಜಿ.ಆರುಲ್ ಮುರುಗನ್ ಅವರ ನೇತೃತ್ವದ ವಿಭಾಗೀಯ ಪೀಠವು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಬಳಿಕ ಅರ್ಜಿಯ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.
ಇದಕ್ಕೂ ಮುನ್ನ ಕೆವಿಎನ್ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಪಿ.ಟಿ ಆಶಾ ನೇತೃತ್ವದ ಏಕಸದಸ್ಯ ನಾಯಪೀಠವು ಪ್ರಮಾಣಪತ್ರ ನೀಡಲು ಸಿಬಿಎಫ್‌ಸಿ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.