
ಜನ ನಾಯಗನ್
ಚೆನ್ನೈ: ತಮಿಳು ನಟ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶದ ವಿರುದ್ಧ ಸೆನ್ಸಾರ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮದ್ರಾಸ್ ಹೈಕೋರ್ಟ್‌ಗೇ ಮರಳುವಂತೆ ಚಿತ್ರದ ನಿರ್ಮಾಪಕರಿಗೆ ಸೂಚನೆ ನೀಡಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶದ ಮೇರೆಗೆ, ಮೇಲ್ಮನವಿ ಆಲಿಸಿದ ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಣ್ ಮುರುಗನ್ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶ ಕಾಯ್ದಿರಿಸಿದೆ.
ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ನಿರ್ದೇಶಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ಮದ್ರಾಸ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಿನಿಮಾ ನಿರ್ಮಾಣ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಸುಪ್ರೀಂ ಕೋರ್ಟ್ ಜನವರಿ 20ರಂದು ಈ ಪ್ರಕರಣದ ವಿಚಾರಣೆ ನಡೆಸುವಂತೆ ಮದ್ರಾಸ್ ಹೈಕೋರ್ಟ್‌ಗೆ ನಿರ್ದೇಶನ ನೀಡಿತ್ತು.
'ಜನ ನಾಯಗನ್' ಸಿನಿಮಾ ಜನವರಿ 9ರ ಪೊಂಗಲ್ ದಿನದಂದು ಬಿಡುಗಡೆಯಾಗಬೇಕಿತ್ತು. ಆದರೆ, ಸಿಬಿಎಫ್‌ಸಿ ಸಮಯಕ್ಕೆ ಸರಿಯಾಗಿ ಪ್ರಮಾಣೀಕರಣ ನೀಡದ ಹಿನ್ನೆಲೆ ಕೊನೆ ಕ್ಷಣದಲ್ಲಿ ಚಿತ್ರದ ಬಿಡುಗಡೆಯನ್ನು ತಡೆಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.