ಚಿತ್ರದ ಪೋಸ್ಟರ್
ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ, ನಟಿ ಜಾಹ್ನವಿ ಕಪೂರ್ ಅಭಿನಯನದ ‘ಪರಮ ಸುಂದರಿ‘ ಚಿತ್ರವು 2025ರ ಜುಲೈನಲ್ಲಿ ತೆರೆ ಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಮೆಡಾಕ್ ಫಿಲ್ಮ್ಸ್ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದೆ.
‘ದಸ್ವಿ‘ ಖ್ಯಾತಿಯ ತುಷಾರ್ ಜಲೋಟಾ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರೇಮಕಥೆ ಜತೆಗೆ ಸಂಘರ್ಷವೂ ಇರಲಿದ್ದು, ಚಿತ್ರ ವಿಭಿನ್ನವಾಗಿ ಮೂಡಿಬರಲಿದೆ ಎಂದು ಚಿತ್ರತಂಡ ಹೇಳಿದೆ.
ಕೇರಳದ ಸ್ಥಳಗಳು ಸೇರಿದಂತೆ ವಿವಿಧ ಕಡೆ ಚಿತ್ರೀಕರಣ ನಡೆಯಲಿದೆ ಎಂದೂ ಪೋಸ್ಟ್‌ನಲ್ಲಿ ಹೇಳಲಾಗಿದೆ.
ಇತ್ತೀಚೆಗೆ ಜೂನಿಯರ್ ಎನ್‌ಟಿಆರ್ ಜತೆಯಾಗಿ ‘ದೇವರ’ ಚಿತ್ರದ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರಕ್ಕೆ ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.