ADVERTISEMENT

ನಿರ್ಮಾಪಕಿ ಜಯಶ್ರೀದೇವಿ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 7:53 IST
Last Updated 13 ಫೆಬ್ರುವರಿ 2019, 7:53 IST
ಜಯಶ್ರೀದೇವಿ
ಜಯಶ್ರೀದೇವಿ   

ಬೆಂಗಳೂರು: ಕನ್ನಡ ಮತ್ತು ತೆಲುಗು ಚಿತ್ರರಂಗದ ನಿರ್ಮಾಪಕಿ ಜಯಶ್ರೀದೇವಿ(60) ಹೈದರಾಬಾದ್‌ನ ಅಪೋಲೊ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

‘ಭವಾನಿ', 'ನಮ್ಮೂರ ಮಂದಾರ ಹೂವೆ', 'ಅಮೃತ ವರ್ಷಿಣಿ', 'ಶ್ರೀಮಂಜುನಾಥ', 'ನಿಶ್ಯಬ್ಧ', 'ಹಬ್ಬ', 'ಸ್ನೇಹ ಲೋಕ' ಸೇರಿದಂತೆ ಕನ್ನಡದ ಹಲವು ಸ್ಟಾರ್‌ ನಟರ ಬಿಗ್ ಬಜೆಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು.

ಮೂರು ವರ್ಷದ ಹಿಂದೆ ತೆರೆಕಂಡ ಸುದೀಪ್ ಮತ್ತು ಉಪೇಂದ್ರ ಅಭಿನಯದ ‘ಮುಕುಂದ ಮುರಾರಿ’ ಚಿತ್ರದ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.