ಚಿತ್ರ ಕೃಪೆ: @hombalefilms
ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ ಅಧ್ಯಾಯ–1‘ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ. ನಟ ಜೂನಿಯರ್ NTR ಸಮ್ಮುಖದಲ್ಲಿ ಸೆಪ್ಟೆಂಬರ್ 28ರಂದು ಹೈದರಾಬಾದ್‌ನಲ್ಲಿ ಸಿನಿಮಾದ ತೆಲುಗು ಭಾಷೆಯ ಪ್ರೀ ರಿಲೀಸ್ ಈವೆಂಟ್ ನಡೆಯಲಿದೆ.
ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ, ‘ಲೆಜೆಂಡ್‌ಗಳ ಐತಿಹಾಸಿಕ ಸಂಗಮಕ್ಕೆ ವೇದಿಕೆ ಸಜ್ಜಾಗಿದೆ‘ ಎಂದು ಬರೆದುಕೊಂಡಿದೆ.
ಈಗಾಗಲೇ ‘ಕಾಂತಾರ ಅಧ್ಯಾಯ–1‘ ಚಿತ್ರದ ಟ್ರೇಲರ್ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ಸುಮಾರು 2 ಕೋಟಿ ವೀಕ್ಷಣೆ ಪಡೆದಿದೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಪ್ರಮೋದ್ ಶೆಟ್ಟಿ ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದು, ಅ. 2 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.