‘ಬಿಗ್‌ಬಾಸ್’ ಖ್ಯಾತಿಯ ನಟ ಶೈನ್ ಶೆಟ್ಟಿ ಹಾಗೂ ಅಂಕಿತಾ ಅಮರ್ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಬಿಡುಗಡೆಗೆ ಸಜ್ಜಾಗುತ್ತಿದೆ. ಶುಕ್ರವಾರ (ಫೆ.14) ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ.
ಎಬಿಬಿಎಸ್ ಸ್ಟುಡಿಯೊಸ್ ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ನಿರ್ದೇಶನದ ಈ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೊಸ್ ವಿತರಣೆ ಮಾಡುತ್ತಿದೆ. ಚಿತ್ರದ ‘ಇದು ಮೊದಲ ಸ್ವಾಗತಾನಾ..’ ಎಂಬ ಹಾಡನ್ನು ಕೆ.ಕಲ್ಯಾಣ್ ಬರೆದಿದ್ದು, ‘ಸರಿಗಮಪ’ ಖ್ಯಾತಿಯ, ‘ದ್ವಾಪರ ದಾಟುತ..’ ಹಾಡು ಹಾಡಿದ್ದ ಜಸ್ಕರಣ್ ಸಿಂಗ್ ಹಾಡಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಹಾಡನ್ನು ಬಿಡುಗಡೆಗೊಳಿಸಲಿದ್ದಾರೆ. ಆನಂದ್ ಆಡಿಯೊ ಯುಟ್ಯೂಬ್ ಚಾನಲ್‌ನಲ್ಲಿ ಚಿತ್ರದ ಎಲ್ಲಾ ಹಾಡುಗಳು ಬಿಡುಗಡೆಯಾಗಲಿವೆ.
ಅಜನೀಶ್ ಈ ಸಿನಿಮಾ ಮೂಲಕ ನಿರ್ಮಾಪಕರಾಗುತ್ತಿದ್ದು, ಸಿ.ಆರ್. ಬಾಬಿ ಅವರೇ ಚಿತ್ರಕ್ಕೆ ಕಥೆ ಬರೆದಿದ್ದಾರೆ. ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.