ADVERTISEMENT

ಹೊಸ ಫೋಟೊ ಹಂಚಿಕೊಂಡ ನಟ ವಿಕ್ಕಿ ಕೌಶಲ್‌: ಅಭಿಮಾನಿಗಳಿಂದ ಭಾರಿ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಏಪ್ರಿಲ್ 2022, 11:12 IST
Last Updated 17 ಏಪ್ರಿಲ್ 2022, 11:12 IST
 ವಿಕ್ಕಿ ಕೌಶಲ್ (ಇನ್‌ಸ್ಟಾಗ್ರಾಮ್‌ ಚಿತ್ರ)
ವಿಕ್ಕಿ ಕೌಶಲ್ (ಇನ್‌ಸ್ಟಾಗ್ರಾಮ್‌ ಚಿತ್ರ)   

ಮುಂಬೈ: ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ವಿಕ್ಕಿ, ಪ್ರವಾಸ, ಸಮಾರಂಭ ಸೇರಿದಂತೆ ಪತ್ನಿ ಕತ್ರಿನಾ ಕೈಫ್‌ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಬಿಳಿ ಶರ್ಟ್ ಧರಿಸಿ ವಿಕ್ಕಿ ಶಾಂತಚಿತ್ತರಾಗಿ ಪರ್ವತಗಳನ್ನು ನೋಡುತ್ತಿರುವ ಫೋಟೊವನ್ನು ಹೃದಯದ ಎಮೋಜಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಸಖತ್‌ ವೈರಲ್‌ ಆಗುತ್ತಿದೆ.

ADVERTISEMENT

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್‌ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್‌, ಸಾರಾ ಅಲಿ ಖಾನ್‌ ಅಭಿನಯಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ಫರ್ಹಾನ್ ಆ್ಯಕ್ಷನ್ ಕಟ್‌ ಹೇಳುತ್ತಿರುವ ‘ಜೀ ಲೆ ಜರಾ’ ಚಿತ್ರದಲ್ಲಿ ಕತ್ರಿನಾ ಕೈಫ್ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.