ADVERTISEMENT

ಹೊಸ ಫೋಟೊ ಹಂಚಿಕೊಂಡ ಕಾಜಲ್‌ ಅಗರ್‌ವಾಲ್‌: ಅಭಿಮಾನಿಗಳಿಂದ ಭಾರಿ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2022, 5:20 IST
Last Updated 8 ಫೆಬ್ರುವರಿ 2022, 5:20 IST
ಕಾಜಲ್‌ ಅಗರ್‌ವಾಲ್‌ (ಇನ್‌ಸ್ಟಾಗ್ರಾಮ್‌ ಚಿತ್ರ)
ಕಾಜಲ್‌ ಅಗರ್‌ವಾಲ್‌ (ಇನ್‌ಸ್ಟಾಗ್ರಾಮ್‌ ಚಿತ್ರ)   

ಬೆಂಗಳೂರು: ನಟಿ ಕಾಜಲ್‌ ಅಗರ್‌ವಾಲ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ದುಬೈ ಪ್ರವಾಸದಲ್ಲಿರುವ ಕಾಜಲ್‌, ಹೋಟೆಲ್‌ವೊಂದರಲ್ಲಿ ಬಾಲ್ಕನಿಯಲ್ಲಿ ಸೂರ್ಯನಿಂದ ಹೊಮ್ಮುವ ಪ್ರಕಾಶಮಾನ ಕಿರಣಗಳನ್ನು ನೋಡುತ್ತಾ ಕ್ಯಾಮರಾಗೆ ಪೋಸ್‌ ನೀಡಿದ್ದಾರೆ.

ಈ ಫೋಟೊವನ್ನು ಸೂರ್ಯನ ಎಮೋಜಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸೂರ್ಯನ ಕಿರಣಗಳು ಮೃದುವಾಗಿ ನನ್ನ ಮುಖವನ್ನು ಸ್ಪರ್ಶಿಸುತ್ತಿವೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಕಾಜಲ್‌ ಅಗರ್‌ವಾಲ್‌ ಅವರು ತುಂಬು ಗರ್ಭಿಣಿಯಾಗಿದ್ದು, ಇತ್ತೀಚೆಗೆ ಅವರ ಬೇಬಿ ಬಂಪ್ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಕಾಜಲ್‌, ಪ್ರವಾಸ, ಸಮಾರಂಭದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಕಾಜಲ್‌ ಅಗರ್‌ವಾಲ್‌ ಮತ್ತು ಗೌತಮ್‌ ಕಿಚ್ಲು ದಂಪತಿ 2020ರ ಅಕ್ಟೋಬರ್‌ 30ರಂದು ಮುಂಬೈನಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವುದಾಗಿ ಕಾಜಲ್ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದರು.

ಪ್ರಸ್ತುತ ‘ಮೆಗಾಸ್ಟಾರ್’ ಚಿರಂಜೀವಿ ಜತೆ ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ನಟಿಸುತ್ತಿದ್ದಾರೆ. ಇದನ್ನು ನಿರ್ದೇಶಿಸುತ್ತಿರುವುದು ಕೊರಟಾಲ ಶಿವ. ಶಂಕರ್‌ ನಿರ್ದೇಶನದ ‘ಇಂಡಿಯನ್‌ 2’ ಸಿನಿಮಾಕ್ಕೂ ಅವರೇ ಹೀರೊಯಿನ್. ಇದರಲ್ಲಿ ಕಮಲ ಹಾಸನ್‌ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.