


ಕಲ್ಯಾಣಿ ಪ್ರಿಯದರ್ಶನ್ ಮುಂದಿನ ಚಿತ್ರದ ಬಗ್ಗೆ ‘ಪೊಟೆನ್ಷನಲ್ ಸ್ಟುಡಿಯೋಸ್’ ಎಕ್ಸ್‌ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
‘ಲೈಟ್‌ಗಳು ಆನ್ ಆಗಿದ್ದು, ಕ್ಯಾಮೆರಾ ರೋಲಿಂಗ್. ಪ್ರಾಜೆಕ್ಟ್ ನಂ.7 ರ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗುತ್ತದೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದೆ.
ತೆಲುಗು ಚಿತ್ರ 'ಹಲೋ' ಮೂಲಕ ಸಿನಿಮಾ ಕ್ಷೇತ್ರ ಪ್ರವೇಶಿಸಿದ ನಟಿ ಕಲ್ಯಾಣಿ ಪ್ರಿಯದರ್ಶನ್ ಇಂದು ಮಲಯಾಳಂ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ.
ವಿನೀತ್ ಶ್ರೀನಿವಾಸನ್ ನಿರ್ದೇಶನದ ‘ಹೃದಯಂ’ ಚಿತ್ರದ ಮೂಲಕ ಕಲ್ಯಾಣಿ ಪ್ರಿಯದರ್ಶನ್ ಪ್ರೇಕ್ಷಕರ ಗಮನ ಸೆಳೆದಿದ್ದರು.
ನಟಿ ಕಲ್ಯಾಣಿ ಪ್ರಿಯದರ್ಶನ್ ‘ಲೋಕಾ: ಚಾಪ್ಟರ್ 1' ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.