ADVERTISEMENT

ಪ್ರೀತಿಯ ಸಹೋದರ ಪುನೀತ್ ನಿಧನ ಅತ್ಯಂತ ಅನಿರೀಕ್ಷಿತ: ಕಮಲ್ ಹಾಸನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಅಕ್ಟೋಬರ್ 2021, 13:25 IST
Last Updated 29 ಅಕ್ಟೋಬರ್ 2021, 13:25 IST
ಪುನೀತ್ ರಾಜ್‌ಕುಮಾರ್
ಪುನೀತ್ ರಾಜ್‌ಕುಮಾರ್   

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಬಹುಭಾಷಾ ನಟರಾದ ಕಮಲ್‌ ಹಾಸನ್‌, ಮೋಹನ್‌ ಲಾಲ್‌ ಹಾಗೂಮಮ್ಮುಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.

‘ನನ್ನ ಪ್ರೀತಿಯ ಕಿರಿಯ ಸಹೋದರ ಪುನೀತ್ ರಾಜ್‌ಕುಮಾರ್ ಅವರ ನಿಧನ ಅತ್ಯಂತ ಅನಿರೀಕ್ಷಿತವಾಗಿದೆ. ನಾವು ಪರಸ್ಪರ ತುಂಬಾ ಪ್ರೀತಿಸುತ್ತಿದ್ದೆವು. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ' ಎಂದು ಕಮಲ್‌ ಹಾಸನ್ ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರ ಅಗಲಿಕೆ ಶೀಘ್ರ ಆಘಾತ ತಂದಿದೆ. ನನಗೆ ಅವರ ನಿಧನ ಸುದ್ದಿಯನ್ನು ನಂಬಲು ಕಷ್ಟವಾಗುತ್ತಿದೆ. ನಾನು ಕಿರಿಯ ಸಹೋದರನನ್ನು ಕಳೆದುಕೊಂಡಂತೆ ಭಾಸವಾಗುತ್ತಿದೆ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ನಟ ಮೋಹನ್‌ ಲಾಲ್‌ ಟ್ವೀಟ್ ಮಾಡಿದ್ದಾರೆ.

ADVERTISEMENT

‘ಪುನೀತ್ ಇನ್ನಿಲ್ಲ ಎಂದು ತಿಳಿದಾಗ ನನಗೆ ಆಘಾತವಾಯಿತು. ಅವರ ಅಗಲಿಕೆಯಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ನಟ ಮಮ್ಮುಟ್ಟಿ ಟ್ವೀಟ್ ಮಾಡಿದ್ದಾರೆ.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.