ADVERTISEMENT

ನಟ ಕಮಲ್‌ ಹಾಸನ್ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2022, 6:17 IST
Last Updated 24 ನವೆಂಬರ್ 2022, 6:17 IST
   

ಚೆನ್ನೈ: ನಟ ಹಾಗೂ ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್‌ ಹಾಸನ್ ಅವರು ಅನಾರೋಗ್ಯ ನಿಮಿತ್ತ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಸಂಜೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ರಾಮಚಂದ್ರ ಮೆಡಿಕಲ್‌ ಕಾಲೇಜಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಜ್ವರ ಇರುವುದು ಗೊತ್ತಾಗಿದೆ. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.