ADVERTISEMENT

ಉತ್ತರ ಕರ್ನಾಟಕದಲ್ಲಿ ‘ಕನಕರಾಜ’ ಚಿತ್ರೀಕರಣ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 23:29 IST
Last Updated 15 ಫೆಬ್ರುವರಿ 2026, 23:29 IST
ನಿಮಿಷ, ಅನೂಪ್‌ ರೇವಣ್ಣ
ನಿಮಿಷ, ಅನೂಪ್‌ ರೇವಣ್ಣ   

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಕುರಿತಾದ ಕಥೆಯನ್ನು ಹೊಂದಿರುವ ‘ಕನಕರಾಜ’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಪ್ರಾರಂಭಗೊಂಡಿದೆ. ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿರುವ ಚಿತ್ರ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಆರ್‌.ರವೀಂದ್ರ ನಿರ್ದೇಶನದ ಚಿತ್ರಕ್ಕೆ ವಿ.ನಾಗೇಂದ್ರ ಪ್ರಸಾದ್‌ ಕಥೆ, ಚಿತ್ರಕಥೆ, ಸಂಗೀತ, ಸಂಭಾಷಣೆಯಿದೆ. 

‘ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಳಗಾವಿ, ಗೋಕಾಕ್ ಮುಂತಾದೆಡೆ ನಡೆಯಲಿದೆ. ಹದಿನೈದು ದಿನಗಳ ಕಾಲ ಮಾತಿನ ಭಾಗ, ಸಾಹಸ ಸನ್ನಿವೇಶಗಳು ಹಾಗೂ ಹಾಡುಗಳ ಚಿತ್ರೀಕರಣ ನಡೆಯಲಿದೆ‌. ನಾಯಕ ಅನೂಪ್ ರೇವಣ್ಣ, ನಾಯಕಿ ನಿಮಿಷ, ಖಳನಟ ಮಂಜುನಾಥ್ ಅರಸ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೊದಲ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿತ್ತು’ ಎಂದಿದೆ ಚಿತ್ರತಂಡ.

‘ಫ್ಯಾನ್‌ ಆಫ್‌ ಸಿಎಂ’ ಎಂಬ ಅಡಿಬರಹ ಚಿತ್ರಕ್ಕಿದೆ. ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸನತ್‌ಕುಮಾರ್‌ ಚಿತ್ರದ ನಿರ್ಮಾಪಕ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಮೋದ್ ಭಾರತೀಯ ಛಾಯಾಚಿತ್ರಗ್ರಹಣ, ಕೆ‌.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ‌.

ADVERTISEMENT

ಶ್ರೀನಾಥ್, ರಾಮಕೃಷ್ಣ, ಪದ್ಮಾವಾಸಂತಿ, ಗಿರೀಶ್ ಜತ್ತಿ, ಯಮುನಾ ಶ್ರೀನಿಧಿ, ಮಿಮಿಕ್ರಿ ಗೋಪಿ ಮುಂತಾದವರು ಚಿತ್ರದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.