ADVERTISEMENT

ಪಂಜಾಬ್‌ನಲ್ಲಿ ಮೋದಿ ಪ್ರಯಾಣಕ್ಕೆ ಅಡ್ಡಿ: ಪ್ರಜಾತಂತ್ರದ ಮೇಲಿನ ದಾಳಿ ಎಂದ ಕಂಗನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜನವರಿ 2022, 6:03 IST
Last Updated 6 ಜನವರಿ 2022, 6:03 IST
ಬಾಲಿವುಡ್‌ ನಟಿ ಕಂಗನಾ ರನೌಟ್‌
ಬಾಲಿವುಡ್‌ ನಟಿ ಕಂಗನಾ ರನೌಟ್‌   

ಪ್ರಧಾನಿ ನರೇಂದ್ರಮೋದಿ ಅವರ ಪ್ರಯಾಣಕ್ಕೆ ಪ‍ಂಜಾಬ್‌ನಲ್ಲಿ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಕಂಗನಾ ರನೌಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ನಾಚಿಕೆಗೇಡಿನ ಸಂಗತಿಯಾಗಿದ್ದು, ಪ್ರಜಾತಂತ್ರದ ಮೇಲೆ ನಡೆದ ದಾಳಿಯಾಗಿದೆ ಎಂದು ಕಂಗನಾ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿಸ್‌ನಲ್ಲಿ ಬರೆದುಕೊಂಡಿರುವ ಅವರು, ‘ಪಂಜಾಬ್‌ನಲ್ಲಿ ನಡೆದದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರಧಾನಿ ಮೋದಿಯು ಪ್ರಜಾತಾಂತ್ರಿಕವಾಗಿ ಆಯ್ಕೆಯಾದ ನಾಯಕರಾಗಿದ್ದಾರೆ. 140 ಕೋಟಿ ಜನರ ಧ್ವನಿಯಾಗಿದ್ದಾರೆ. ಅವರ ಮೇಲೆ ನಡೆದ ದಾಳಿಯು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿಯಾಗಿದೆ. ಇದು ಪ್ರಜಾತಂತ್ರದ ಮೇಲೆ ನಡೆದ ದಾಳಿಯೂ ಆಗಿದೆ’ ಎಂದು ಟೀಕಿಸಿದ್ದಾರೆ.

ADVERTISEMENT

'ಪಂಜಾಬ್ ಭಯೋತ್ಪಾದಕ ಚಟುವಟಿಕೆಗಳ ಕೇಂದ್ರವಾಗುತ್ತಿದೆ. ಈಗ ನಾವು ಆ ಚಟುವಟಿಕೆಗಳನ್ನು ತಡೆಯದಿದ್ದರೆ, ದೇಶವು ದೊಡ್ಡ ಬೆಲೆ ತೆರಬೇಕಾಗುತ್ತದೆ’ ಎಂದೂ ಕಂಗನಾ ಹೇಳಿದ್ದಾರೆ.

ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬುಧವಾರ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮೇಲ್ಸೇತುವೆಯಲ್ಲಿ 15–20 ನಿಮಿಷ ಸಿಲುಕಿದ್ದರು.

ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡುವುದನ್ನು ವಿರೋಧಿಸಿದ್ದ ರೈತ ಸಂಘಟನೆಯು ರಸ್ತೆತಡೆ ನಡೆಸಿತ್ತು. ಹೀಗಾಗಿ, ಮೋದಿ ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿ ವಾಪಸಾದರು. ಇದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.