'ಎಮರ್ಜೆನ್ಸಿ' ಸಿನಿಮಾದಲ್ಲಿ ಕಂಗನಾ ರನೌತ್
ನವದೆಹಲಿ: ಎಮರ್ಜೆನ್ಸಿ ಚಿತ್ರ ಮಾರ್ಚ್ 17 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ನಟಿ, ಸಂಸದೆ ಕಂಗನಾ ರನೌತ್ ಘೋಷಿಸಿದ್ದಾರೆ.
ಚಿತ್ರದಲ್ಲಿ ಸಿಖ್ ಸಮುದಾಯದ ಬಗೆಗಿನ ನಿರೂಪಣೆ ಸೂಕ್ತವಾಗಿಲ್ಲ. ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಶಿರೋಮಣಿ ಅಕಾಲಿ ದಳ ಸೇರಿದಂತೆ ಕೆಲ ಸಿಖ್ ಸಂಘಟನೆಗಳು ಸಿನಿಮಾ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದವು. ಹೀಗಾಗಿ, ಸಿನಿಮಾದಲ್ಲಿ ಕೆಲವು ಭಾಗಗಳಿಗೆ ಕತ್ತರಿ ಹಾಕಲಾಗಿತ್ತು. ಬಳಿಕ ಜನವರಿ 17ರಂದು ಚಿತ್ರ ತೆರೆಕಂಡಿತ್ತು.
1975ರ ತುರ್ತು ಪರಿಸ್ಥಿತಿ ಕಥಾ ಹಂದರವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ನಟಿ ಕಂಗನಾ ರನೌತ್ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಅನುಪಮ್ ಖೇರ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್, ಮಿಲಿಂದ್ ಸೋಮನ್ ನಟಿಸಿದ್ದಾರೆ. ಜೀ ಸ್ಟುಡಿಯೋಸ್ ಮತ್ತು ಮಣಿಕರ್ಣಿಕಾ ಫಿಲಂಸ್ ಚಿತ್ರವನ್ನು ನಿರ್ಮಿಸಿದೆ.
ಇಂದಿರಾ ಗಾಂಧಿಯವರ ಹಳೆಯ ಚಿತ್ರದ ಜೊತೆಗೆ ಚಿತ್ರದ ಒಂದು ಪೋಸ್ಟರ್ ಅನ್ನು ಕಂಗಾನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ಅದಕ್ಕೆ ಮಾರ್ಚ್ 17 @netflix ನಲ್ಲಿ ಬಿಡುಗಡೆಯಾಗುತ್ತಿದೆ ಎಂದು ಶೀರ್ಷಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.