ADVERTISEMENT

ಮೂರನೇ ಮಗು ಹೊಂದಿದವರನ್ನು ಜೈಲಿಗೆ ರವಾನಿಸಿ: ಕಂಗನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಏಪ್ರಿಲ್ 2021, 10:57 IST
Last Updated 21 ಏಪ್ರಿಲ್ 2021, 10:57 IST
ಕಂಗನಾ ರಣಾವತ್
ಕಂಗನಾ ರಣಾವತ್   

ಮುಂಬೈ: ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ಮೂರನೇ ಮಗು ಹೊಂದಿದರೆ ಜೈಲಿಗೆ ರವಾನಿಸಬೇಕು ಎಂದು ಹೇಳಿದ್ದಾರೆ.

ಕಂಗನಾ ರಣಾವತ್ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜನಸಂಖ್ಯೆ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಬೇಕು. ವೋಟ್ ರಾಜಕಾರಣದಿಂದ ಬೇಸತ್ತು ಹೋಗಿದ್ದೇವೆ. ಈ ಸಮಸ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಬಲವಂತವಾಗಿ ಜನರ ಸಂತಾನಶಕ್ತಿ ಹರಣಗೊಳಿಸಲು ಮುಂದಾಗಿದ್ದರು. ಆದರೆ ಬಳಿಕ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇಂದಿನ ಬಿಕ್ಕಟ್ಟನ್ನು ಗಮನಿಸಿದಾಗ ಕನಿಷ್ಠ ಮೂರನೇ ಮಗು ಹೊಂದಿದರೆ ದಂಡ ಅಥವಾ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಇಲ್ಲಿ ಗಮನಾರ್ಹ ಸಂಗತಿಯೆಂದರೆ ಸ್ವತಃ ಕಂಗನಾ ಪೋಷಕರು ಬಾಲಿವುಡ್ ನಟಿ ಸೇರಿದಂತೆ ಮೂವರು ಮಕ್ಕಳನ್ನು ಹೊಂದಿದ್ದಾರೆ. ಈ ನಿಯಮವು ಆಕೆಯ ಪೋಷಕರಿಗೂ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.