ಬೆಂಗಳೂರು: ಕಳೆದ 25 ವರ್ಷಗಳಿಂದ ನಟ ದರ್ಶನ್ ತೂಗುದೀಪ ಅವರೊಂದಿಗೆ ಕೆಲಸ ಮಾಡುತ್ತಿದ್ದ ಮೇಕಪ್ ಆರ್ಟಿಸ್ ಹೊನ್ನೇಗೌಡ ಅವರು ಇಂದು ನಿಧನರಾಗಿದ್ದಾರೆ.
ಅವರ ನಿಧನಕ್ಕೆ ದರ್ಶನ್ ಅವರು ಸಂತಾಪ ಸೂಚಿಸಿದ್ದಾರೆ.
‘25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಪ್ರೀತಿಯ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ಅವರು ಅಗಲಿದ ಸುದ್ದಿ ಕೇಳಿ ದುಃಖವಾಗಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೇಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.