ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ನಗರದ ಶೇಷಾದ್ರಿಪುರದಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಅವರಿಗೆ ಲಘು ಹೃದಯಾಘಾತವಾಗಿತ್ತು. ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಹಾಸ್ಯ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿದ್ದ ಮನ್‌ದೀಪ್ ರಾಯ್, 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಳೆದ ನಾಲ್ಕು ದಶಕಗಳಲ್ಲಿ ವರನಟ ಡಾ.ರಾಜ್‌ಕುಮಾರ್, ಶಂಕರ್‌ನಾಗ್, ಅನಂತನಾಗ್ ಹೀಗೆ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗಷ್ಟೇ ಅಲ್ಲದೆ, ಇತ್ತೀಚೆಗಿನ ಯುವ ಚಿತ್ರತಂಡಗಳೊಂದಿಗೂ ಅವರು ಬಣ್ಣಹಚ್ಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.