ADVERTISEMENT

ನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 4:22 IST
Last Updated 2 ಜುಲೈ 2020, 4:22 IST
ಮಿಮಿಕ್ರಿ ರಾಜಗೋಪಾಲ್
ಮಿಮಿಕ್ರಿ ರಾಜಗೋಪಾಲ್   

ಬೆಂಗಳೂರು: ಸುಮಾರು 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಅಭಿಮಾನಿಗಳಿಗೆ ಹಾಸ್ಯದೂಟ ಬಡಿಸಿದ್ದ ನಟ ಮಿಮಿಕ್ರಿ ರಾಜಗೋಪಾಲ್ ಗುರುವಾರವಿಧಿವಶರಾಗಿದ್ದಾರೆ. ಅವರಿಗೆ 69 ವಯಸ್ಸಾಗಿತ್ತು.

ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೆಂಗೇರಿಯ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಕನ್ನಡ ಹಾಗೂ ಇತರೆ ಭಾಷೆಗಳಲ್ಲಿ ಹಾಸ್ಯನಟನಾಗಿ, ಪೋಷಕ ನಟನಾಗಿ ಅಭಿನಯಿಸಿದ್ದ ಅವರುತಮಿಳು ಚಿತ್ರಗಳಲ್ಲಿಯೂ ಬಣ್ಣಹಚ್ಚಿದ್ದರು. ರಾಜಗೋಪಾಲ್ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

1983ರಿಂದ ಸಿನಿಮಾದಲ್ಲಿ ಅಭಿನಯಿಸಲು ಆರಂಭಿಸಿದರು.ಡಿಡಿ 1 ಆರಂಭವಾದಾಗಿನಿಂದ 'ಪಾಪ ಪಾಂಡು'ವರೆಗೂ ಸುಮಾರು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.ಹಲವು ಕಲಾವಿದರ ಧ್ವನಿಗಳನ್ನು ಅನುಕರಣೆ ಮಾಡುವುದರಲ್ಲಿ ಪರಿಣತರಾಗಿದ್ದ ಮಿಮಿಕ್ರಿ ರಾಜಗೋಪಾಲ್, ನಟಿ ಕಲ್ಪನಾ ಧ್ವನಿಯನ್ನು ಅನುಕರಿಸುವುದರಲ್ಲಿ ನಿಪುಣರು. ಕಲ್ಪನಾ ಧ್ವನಿಯಲ್ಲೇ ಹೆಚ್ಚು ಜನಪ್ರಿಯರೂ ಹೌದು.ಕಾಪಿಕಟ್ಟೆ, ರಿಯಲ್ ಪೊಲೀಸ್, ಸಾಧಕರು, ಗೋಸಿ ಗ್ಯಾಂಗ್, ಸೂಪರ್ ಪೊಲೀಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.