ನವದೆಹಲಿ: ಡ್ರಗ್ಸ್ ಪೂರೈಕೆ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಕನ್ನಡ ಚಿತ್ರನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ನಿರಾಕರಿಸಿ ರಾಜ್ಯ ಹೈಕೋರ್ಟ್ ನವೆಂಬರ್ 3ರಂದು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಾಗಿಣಿ ಅವರ ಅರ್ಜಿಯ ವಿಚಾರಣೆ ಡಿಸೆಂಬರ್ 4ರಂದು ನಡೆಯಲಿದೆ.
ನಿಷೇಧಿತ ಮಾದಕ ವಸ್ತುಗಳ ಪೂರೈಕೆ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4ರಂದು ಸೆಪ್ಟೆಂಬರ್ 4ರಂದು ಬೆಂಗಳೂರಿನಲ್ಲಿ ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.