ADVERTISEMENT

Sandalwood: ಮತ್ತೆ ಒಂದಾದ ಎಸ್. ಮಹೇಂದರ್ – ಹಂಸಲೇಖ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 23:30 IST
Last Updated 9 ಜನವರಿ 2026, 23:30 IST
ಎಸ್‌.ಮಹೇಂದರ್‌,ಹಂಸಲೇಖ,ಕೆ.ಸಿ ವಿಜಯ ಕುಮಾರ್
ಎಸ್‌.ಮಹೇಂದರ್‌,ಹಂಸಲೇಖ,ಕೆ.ಸಿ ವಿಜಯ ಕುಮಾರ್   

ಒಂದು ಕಾಲಕ್ಕೆ ಸೂಪರ್ ಹಿಟ್‌ ಚಿತ್ರಗಳನ್ನು ನೀಡಿದ ಎಸ್‌.ಮಹೇಂದರ್‌ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಹೊಸ ಚಿತ್ರವೊಂದಕ್ಕಾಗಿ ಮತ್ತೆ ಒಂದಾಗಿದ್ದಾರೆ. ಶೀಘ್ರದಲ್ಲಿ ಈ ಚಿತ್ರ ಸೆಟ್ಟೇರಲಿದೆ.

‘ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ, ಹೊಸ ತಲೆಮಾರಿನ ಸಿನಿಮಾಗಳು ಬರುತ್ತಿವೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಸೂಸುತ್ತಿವೆ. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು, ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು ಮತ್ತೆ ಬರುತ್ತಿದ್ದಾರೆ’ ಎಂದು ಚಿತ್ರತಂಡ ಹೇಳಿದೆ.

ಈ ಜೋಡಿ ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿತ್ತು. ಶ್ರೀಗುರುರಾಯರು ಸಿನಿಮಾ ಬ್ಯಾನರ್‌ನಡಿಯಲ್ಲಿ ಕೆ.ಸಿ ವಿಜಯ ಕುಮಾರ್ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಜ.16ರಂದು ಚಿತ್ರ ಸೆಟ್ಟೇರಲಿದೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.