ADVERTISEMENT

ಹಿರಿಯ ನಟ ಸತ್ಯಜಿತ್‌ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 4:00 IST
Last Updated 10 ಅಕ್ಟೋಬರ್ 2021, 4:00 IST
ಸತ್ಯಜಿತ್‌
ಸತ್ಯಜಿತ್‌   

ಬೆಂಗಳೂರು: ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲಿ ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸತ್ಯಜಿತ್‌(72) ಭಾನುವಾರ ಮುಂಜಾನೆ 2 ಗಂಟೆಗೆ ನಿಧನರಾದರು.

ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವಾರದ ಹಿಂದಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯದ ಸಮಸ್ಯೆಗಳ ಜೊತೆ 2016ರಲ್ಲಿ ಗ್ಯಾಂಗ್ರಿನ್‌ಗೆ ತುತ್ತಾಗಿ ಒಂದು ಕಾಲನ್ನು ಸತ್ಯಜಿತ್‌ ಕಳೆದುಕೊಂಡರು. ಬಳಿಕವೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು.

ಅವರಿಗೆ ಪುತ್ರಿ ಹಾಗೂ ಪುತ್ರ ಇದ್ದಾರೆ. ಪುತ್ರಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗಿ. ಪುತ್ರ ಚಿತ್ರರಂಗದಲ್ಲಿ ತೊಡಗಿದ್ದಾರೆ.

ADVERTISEMENT

ಬೆಳ್ಳಿತೆರೆಯ ಮೇಲೆ ಖಳ, ಪೊಲೀಸ್‌, ಪೋಷಕ ನಟನಾಗಿ ಸತ್ಯಜಿತ್ ಅವರನ್ನು ಕಾಣದವರು ಅಪರೂಪ.

1986ರಲ್ಲಿ ಬಿಡುಗಡೆಯಾದ ‘ಅಂಕುಶ್‌’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟರು. ಮುಂದೆ ಮೈಸೂರು ಜಾಣ (1992) ಅವರಿಗೆ ಚಂದನವನದಲ್ಲಿ ನೆಲೆಯೂರಲು ಬ್ರೇಕ್‌ ಕೊಟ್ಟ ಸಿನಿಮಾ. ‘ಪುಟ್ನಂಜ’, ‘ಶಿವಮೆಚ್ಚಿದ ಕಣ್ಣಪ್ಪ’, ‘ಚೈತ್ರದ ಪ್ರೇಮಾಂಜಲಿ’, ‘ಆಪ್ತಮಿತ್ರ’ ಚಿತ್ರದ ಪಾತ್ರಗಳು ಜನಮಾನಸದಲ್ಲಿ ಇನ್ನೂ ನೆನಪಿವೆ. 600ಕ್ಕೂ ಅಧಿಕ ಸಿನಿಮಾಗಳಲ್ಲಿ ಸತ್ಯಜಿತ್‌ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.