ADVERTISEMENT

ಕವಿರತ್ನ ಕಾಳಿದಾಸ ಚಿತ್ರ ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್‌ನಿಂದ ಸಾವು

​ಪ್ರಜಾವಾಣಿ ವಾರ್ತೆ
Published 6 ಮೇ 2021, 4:53 IST
Last Updated 6 ಮೇ 2021, 4:53 IST
ರೇಣುಕಾ ಶರ್ಮಾ
ರೇಣುಕಾ ಶರ್ಮಾ   

ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ, ಅಂತಹ ಹಿಟ್, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ(81) ಕೋವಿಡ್‌ಗೆ ಬಲಿಯಾಗಿದ್ದಾರೆ.

ಸೋಂಕಿಗೆ ತುತ್ತಾಗಿದ್ದ ಅವರನ್ನು ಗಿರಿನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

1981ರಲ್ಲಿ ಅನುಪಮ ಚಿತ್ರದ ಮೂಲಕ ಅವರು ನಿರ್ದೇಶನ ಕ್ಷೇತ್ರಕ್ಕೆ ಬಂದಿದ್ದರು. ‘ಶಹಬ್ಬಾಸ್ ವಿಕ್ರಮ್’, ‘ಸತ್ಕಾರ’ ಹಾಗೂ ‘ನಮ್ಮ ಊರ ದೇವತೆ’, ‘ಶಬರಿಮಲೆ ಶ್ರೀ ಅಯ್ಯಪ್ಪ’, ‘ಭರ್ಜರಿ ಗಂಡು’ ಹಾಗೂ ‘ಹಠಮಾರಿ ಹೆಣ್ಣು ಕಿಲಾಡಿ ಗಂಡು’, ‘ಕೊಲ್ಲೂರು ಶ್ರೀ ಮೂಕಾಂಬಿಕೆ’ ಅವರ ನಿರ್ದೇಶನದ ಸೂಪರ್ ಹಿಟ್ ಚಿತ್ರಗಳು.

ಶರ್ಮಾ ಅವರಿಗೆ ಪತ್ನಿ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಇಂದು ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.