ADVERTISEMENT

ಹರಿಪ್ರಿಯಗೆ ಮತ್ತೊಂದು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 19:30 IST
Last Updated 4 ಫೆಬ್ರುವರಿ 2021, 19:30 IST
ಹರಿಪ್ರಿಯ
ಹರಿಪ್ರಿಯ   

‘ಅಮೃತಮತಿ’ ಕನ್ನಡ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯ ಅವರು ಇತ್ತೀಚೆಗೆ ನೋಯ್ಡಾದಲ್ಲಿ ನಡೆದ 8ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ.

ನೋಯ್ಡಾದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಇನ್ನೊಂದು ಸಂಸ್ಥೆಯು ಆಯೋಜಿಸಿದ್ದ ‘ಭಾರತೀಯ ವಿಶ್ವ ಚಲನಚಿತ್ರೋತ್ಸವ’ದಲ್ಲೂ ಅಮೃತಮತಿಯ ಪಾತ್ರಕ್ಕಾಗಿ ಹರಿಪ್ರಿಯ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಪಡೆದಿದ್ದರು. ಹೀಗೆ ಎರಡು ಅಂತರರಾಷ್ಟ್ರೀಯ ಚಿತ್ರೋತ್ಸವಗಳ ಸ್ಪರ್ಧಾ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕೀರ್ತಿಗೆ ಅವರು ಭಾಜನರಾಗಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ ಈ ಚಿತ್ರವು ಈಗಾಗಲೇ ಆರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.ಕವಿ ಜನ್ನನಿಂದ ರಚಿತವಾದ ‘ಯಶೋಧರ ಚರಿತೆ’ ಕಾವ್ಯವನ್ನು ಈ ಚಿತ್ರ ಆಧರಿಸಿದೆ. ಈ ಕಾವ್ಯದಲ್ಲಿ ಬರುವ ಅಮೃತಮತಿ ಪ್ರಸಂಗವನ್ನು ಮರುಸೃಷ್ಟಿಸಿ, ಮರು ವ್ಯಾಖ್ಯಾನಕ್ಕೆ ಒಳಪಡಿಸಿದ್ದಾರೆ ಬರಗೂರು.ರಾಜ್ಯದ ಚಿತ್ರ ಮಂದಿರಗಳಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಈ ಚಿತ್ರವನ್ನು ನಿರ್ಮಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.