ADVERTISEMENT

Daredevil Mustafa: ‘ಡೇರ್‌ ಡೆವಿಲ್‌’ಗೆ ತೆರಿಗೆ ವಿನಾಯಿತಿ ನೀಡಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 15 ಜೂನ್ 2023, 10:00 IST
Last Updated 15 ಜೂನ್ 2023, 10:00 IST
ಡೇರ್‌ ಡೆವಿಲ್‌ ಮುಸ್ತಾಫಾ ಸಿನಿಮಾದ ಪೋಸ್ಟರ್‌ 
ಡೇರ್‌ ಡೆವಿಲ್‌ ಮುಸ್ತಾಫಾ ಸಿನಿಮಾದ ಪೋಸ್ಟರ್‌    

ಬೆಂಗಳೂರು: ಇತ್ತೀಚೆಗಷ್ಟೇ ತೆರೆಕಂಡಿದ್ದ ಶಶಾಂಕ್‌ ಸೋಗಲ್‌ ನಿರ್ದೇಶನದ ‘ಡೇರ್‌ ಡೆವಿಲ್‌ ಮುಸ್ತಾಫಾ’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ. 

‘ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕತೆಯಾಧಾರಿತ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ. ಇಂದಿನ ಕಾಲಘಟ್ಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. 

ಹೆಚ್ಚಿನ ಜನರು ಹಾಗೂ ವಿದ್ಯಾರ್ಥಿಗಳು ಸಿನಿಮಾ ನೋಡಲು ಅನುಕೂಲವಾಗುವಂತೆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡ ಜೂನ್‌ 11ರಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಇದಕ್ಕೂ ಮುನ್ನ ಚಿತ್ರತಂಡವೇ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿನ ಟಿಕೆಟ್‌ ದರವನ್ನು ಕ್ರಮವಾಗಿ ₹50/₹75 ಹಾಗೂ ₹99ಕ್ಕೆ ಇಳಿಸಿತ್ತು.  

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.