
‘ಕನ್ನಡತಿ’ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಹಾಗೂ ಕಾಜಲ್ ಕುಂದರ್ ಜೋಡಿಯಾಗಿ ನಟಿಸಿರುವ ‘ಮೇಘ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಖ್ಯಾತ ಗೀತರಚನೆಕಾರ ವಿ.ನಾಗೇಂದ್ರ ಪ್ರಸಾದ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದರು.
‘ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ‘ಮೇಘ’ಗಳು ಆಕಾಶದಲ್ಲಿ ಯಾವಾಗಲೂ ಒಟ್ಟಾಗೆ ಚಲಿಸುತ್ತವೆ. ಆದರೆ ಮಳೆಯನ್ನು ಎಲ್ಲೋ ಸುರಿಸುತ್ತವೆ. ಇದನ್ನೇ ಇಟ್ಟುಕೊಂಡು ಪ್ರೇಮ ಕಥೆ ಸಿದ್ದಮಾಡಿಕೊಂಡೆ. ನಮ್ಮ ಸಿನಿಮಾದಲ್ಲಿ ‘ಮೇಘ’ ಎಂದರೆ ಪ್ರೀತಿ’’ ಎಂದರು ನಿರ್ದೇಶಕ ಚರಣ್.
ಯತೀಶ್ ಹೆಚ್.ಆರ್ ನಿರ್ಮಾಣ ಮಾಡಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಿದೆ. ಐದು ಹಾಡುಗಳಿದ್ದು, ಜೋಯಲ್ ಸಕ್ಕರಿ ಸಂಗೀತ ಸಂಯೋಜಿಸಿದ್ದಾರೆ. ಗೌತಮ್ ನಾಯಕ್ ಛಾಯಾಚಿತ್ರಗ್ರಹಣ ಹಾಗೂ ಸಂಕಲನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.