ADVERTISEMENT

ಸುದೀಪ್‌ ಅಭಿನಯದ ‘ಪೈಲ್ವಾನ್’ ಚಿತ್ರ ಸೆಪ್ಟೆಂಬರ್‌ 12ಕ್ಕೆ ಬಿಡುಗಡೆ

ಏಕಕಾಲಕ್ಕೆ ಐದು ಭಾಷೆಗಳಲ್ಲಿ ತೆರೆಗೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 8:49 IST
Last Updated 25 ಜುಲೈ 2019, 8:49 IST
'ಪೈಲ್ವಾನ್' ಚಿತ್ರದಲ್ಲಿ ಸುದೀಪ್
'ಪೈಲ್ವಾನ್' ಚಿತ್ರದಲ್ಲಿ ಸುದೀಪ್   

ನಟ ಸುದೀಪ್‌ ನಟನೆಯ, ಕೃಷ್ಣ ನಿರ್ದೇಶನದ ‘ಪೈಲ್ವಾನ್’ ಚಿತ್ರ ಸೆಪ್ಟೆಂಬರ್‌ 12ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ.

ಇದಕ್ಕೂ ಮೊದಲು ಆಗಸ್ಟ್ 29ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರಚಾರ ಆರಂಭಿಸಿದ್ದು. ಜುಲೈ 27ರಂದು ಚಿತ್ರದುರ್ಗದಲ್ಲಿ ಆಡಿಯೊ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೂ ಮೊದಲು ಮೂರು ಹಾಡುಗಳನ್ನು ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ. ಆಗಸ್ಟ್‌ ಮೊದಲ ವಾರ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಮುಂದೆ ಹೋಗಲು ಚಿತ್ರತಂಡ ತೀರ್ಮಾನಿಸಿದೆ.

‘ಹೆಬ್ಬುಲಿ’ ಚಿತ್ರದ ಬಳಿಕ ಸುದೀಪ್‌ ಮತ್ತು ಕೃಷ್ಣ ಜೋಡಿ ಜತೆಗೂಡಿ ಮಾಡಿರುವ ಚಿತ್ರವಿದು. ಸ್ಯಾಂಡಲ್‌ವುಡ್‌ನಲ್ಲಿ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ.

ಮಲಯಾಳ ಭಾಷೆ ಹೊರತುಪಡಿಸಿ ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಅವತರಣಿಕೆಯ ಈ ಸಿನಿಮಾದಲ್ಲಿ ತಮ್ಮ ಪಾತ್ರಕ್ಕೆ ಸುದೀಪ್‌ ಅವರೇ ಡಬ್ಬಿಂಗ್‌ ಮಾಡಿದ್ದಾರಂತೆ.

ಈ ಸಿನಿಮಾಕ್ಕೆ ನಿರ್ಮಾಪಕಿ ಸ್ವಪ್ನ ಕೃಷ್ಣ ಬಂಡವಾಳ ಹೂಡಿದ್ದಾರೆ. ಆಕಾಂಕ್ಷಾ ಸಿಂಗ್‌ ಈ ಚಿತ್ರದ ನಾಯಕಿ. ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ, ಕಬೀರ್ ದುಹಾನ್‌ ಸಿಂಗ್‌, ಶರತ್‌ ಲೋಹಿತಾಶ್ವ ತಾರಾಗಣದಲ್ಲಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಕರುಣಾಕರ ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.