
ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ, ಗುರುತೇಜ್ ಶೆಟ್ಟಿ ನಿರ್ದೇಶನದ ‘ಜಾಕಿ-42’ದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.
ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. ಕುದುರೆ ಓಟದ ಸ್ಪರ್ಧೆಯ ಹಿನ್ನೆಲೆಯಲ್ಲಿ ನಡೆಯುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಕಿರಣ್ ರಾಜ್ ದ್ವಿಪಾತ್ರದಲ್ಲಿ ನಟಿಸಿರುವುದು ಚಿತ್ರದ ವಿಶೇಷ. ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿ ಇದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದಿದೆ ಚಿತ್ರತಂಡ. ಕ್ರಿಸ್ಮಸ್ ಹಬ್ಬದ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ.
ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನ, ರಾಘವೇಂದ್ರ ಬಿ.ಕೋಲಾರ ಛಾಯಾಚಿತ್ರಗ್ರಹಣ, ಉಮೇಶ್ ಆರ್.ಬಿ. ಸಂಕಲನ ಹಾಗೂ ಸತೀಶ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಕಿರಣ್ ರಾಜ್‌ಗೆ ಜೋಡಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದು, ದೀಪಕ್ ರೈ ಪಾಣಾಜೆ, ರಾಜೇಂದ್ರ ಕಾರಂತ್, ಮಧುಸೂದನ್, ಶಾಂತಲಾ ಕಾಮತ್, ಬಲ ರಾಜವಾಡಿ, ಯಶ್ ಶೆಟ್ಟಿ, ಚೇತನ್ ರೈ ಮಾಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.