ADVERTISEMENT

Kannada Movie: ಈ ವಾರ ಎರಡು ಸಿನಿಮಾಗಳು ತೆರೆಗೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 23:30 IST
Last Updated 25 ಸೆಪ್ಟೆಂಬರ್ 2025, 23:30 IST
ಮೇಘಶ್ರೀ
ಮೇಘಶ್ರೀ   

ಕರಾಸ್ತ್ರ

ಯಾವುದೇ ರೀತಿ ಆಪತ್ತಿನ ಸಂದರ್ಭ ಎದುರಾದರೂ ಮಹಿಳೆಯರು ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬ ಸಂದೇಶ ಸಾರುವ ಚಿತ್ರವಿದು. ನಾರಾಯಣ ಪೂಜಾರ ನಿರ್ಮಿಸಿ, ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

‘ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನನ್ನೂರು ಬ್ಯಾಡಗಿ. ಹೀಗಾಗಿ ಉತ್ತರ ಕರ್ನಾಟಕದ ಪ್ರತಿಭೆಗಳು ಈ ಚಿತ್ರದಲ್ಲಿದ್ದಾರೆ. ನಮ್ಮ ಚಿತ್ರದಲ್ಲಿ ಕರಾಟೆ ಒಂದು ಭಾಗ. ನಾಯಕಿಗೆ ಒಂದು ಸಮಸ್ಯೆ ಎದುರಾಗುತ್ತದೆ. ಆಕೆ ಅದನ್ನು ಹೇಗೆ ಬಗೆಹರಿಸುತ್ತಾಳೆ ಎಂಬುದೇ ಚಿತ್ರಕಥೆ’ ಎಂದಿದ್ದಾರೆ ನಿರ್ದೇಶಕ. 

ಮನಿಷಾ ಕಬ್ಬೂರ ಚಿತ್ರದ ನಾಯಕಿ. ಚಿತ್ರದಲ್ಲಿ ಕಾರ್ತೀಕ್ ಪೂಜಾರ್, ಶ್ರೀನಿವಾಸ ಹುಲಕೋಟೆ, ಕ್ಷಿತಿ ವೀರಣ್ಣ, ವಿದ್ಯಾ ಬೆಳಗಾವಿ, ಸ್ಟೆಫಿ ಲೂಯಿಸ್ ಮುಂತಾದವರಿದ್ದಾರೆ. ಶಂಕರ ಸುಗ್ನಳ್ಳಿ, ಲಕ್ಷ್ಮಣ, ಮೈಲಾರಿ, ಗಗನ್ ಅವರ ಛಾಯಾಚಿತ್ರಗ್ರಹಣ, ಮಹಾರಾಜ್ ಸಂಗೀತ, ರಾಜ್ ಭಾಸ್ಕರ್ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

ADVERTISEMENT

ಕುಂಟೆಬಿಲ್ಲೆ 

ಗ್ರಾಮೀಣ ಸೊಗಡಿನ ಕಥಾಹಂದರ ಹೊಂದಿರುವ ಚಿತ್ರ. ಜಿ.ಬಿ.ಎಸ್‌. ಸಿದ್ದೇಗೌಡ ನಿರ್ದೇಶನವಿದೆ. ಯುವ ನಟ ಯದುಗೆ ಮೇಘಶ್ರೀ ಜೋಡಿಯಾಗಿದ್ದಾರೆ.

ಸುಚೇಂದ್ರ ಪ್ರಸಾದ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಕಾವ್ಯ ಮೊದಲಾದವರು ಚಿತ್ರದಲ್ಲಿದ್ದಾರೆ.  ‘ನಾವೆಲ್ಲ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ‘ಕುಂಟೆಬಿಲ್ಲೆ‌’. ಅದೇ ಶೀರ್ಷಿಕೆ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡುವ ಹಳ್ಳಿಯ ಸೊಗಡಿನ ಕಥೆ ಮಾಡಿದ್ದೇವೆ. ಲವ್​, ಸಸ್ಪೆನ್ಸ್​ ಅಂಶಗಳಿರುವ ಚಿತ್ರ. ನಮ್ಮ ಕೈಯಾರೆ ನಾವೇ ನಮ್ಮ ಪ್ರೀತಿಯನ್ನು ಹೇಗೆ ಹಾಳು ಮಾಡಿಕೊಳ್ಳುತ್ತೇವೆ ಎಂಬುದರ ಸುತ್ತ ಕಥೆ ಸಾಗುತ್ತದೆ’ ಎಂದಿದ್ದಾರೆ ನಿರ್ದೇಶಕ.

ಕುಮಾರ್ ಗೌಡ ಬಂಡವಾಳ ಹೂಡಿದ್ದಾರೆ. ಹರಿಕಾವ್ಯ ಸಂಗೀತ, ಮುಂಜಾನೆ ಮಂಜು ಛಾಯಾಚಿತ್ರಗ್ರಹಣವಿದೆ.

ಮನಿಷಾ ಕಬ್ಬೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.