ಬೆಂಗಳೂರು: ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ ‘ಕಾಂತಾರ’ ಚಿತ್ರತಂಡ, ಸಿನಿಮಾದ ಪ್ರೀಕ್ವೆಲ್ 2025ರ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದೆ.
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರ(ಕಾಂತಾರ ಚಾಪ್ಟರ್–1) ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರವನ್ನು ಹೊಂದಿದೆ. ಚಿತ್ರವು ಕನ್ನಡ, ತೆಲುಗು, ತಮಿಳು,ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಚಿತ್ರದ ಬಹುಭಾಗ ಕುಂದಾಪುರದಲ್ಲಿ ಚಿತ್ರೀಕರಣಗೊಂಡಿದ್ದು, ತಮ್ಮ ಪಾತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ಕಳರಿಪಯಟ್ಟು ತರಬೇತಿ ಪಡೆದಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ನೀಡಿದ್ದಾರೆ. ಖ್ಯಾತ ಸಾಹಸ ನಿರ್ದೇಶಕ ಟೊಡರ್ ಲ್ಯಾಜರೋವ್ ಅವರು ಸಾಹಸ ದೃಶ್ಯಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಪ್ರೀಕ್ವೆಲ್ ಅನ್ನು ಈಗಾಗಲೇ ಪ್ರೈಂ ವಿಡಿಯೊ ದೊಡ್ಡ ಮೊತ್ತಕ್ಕೆ ಖರೀದಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.