ADVERTISEMENT

ಸ್ಪ್ಯಾನಿಶ್ ಭಾಷೆಯ ಟ್ರೇಲರ್ ಬಿಡುಗಡೆ: ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್ 1

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2025, 10:37 IST
Last Updated 30 ಅಕ್ಟೋಬರ್ 2025, 10:37 IST
<div class="paragraphs"><p>ಕಾಂತಾರ ಚಾಪ್ಟರ್–1 ಪೋಸ್ಟರ್</p></div>

ಕಾಂತಾರ ಚಾಪ್ಟರ್–1 ಪೋಸ್ಟರ್

   

ಇನ್‌ಸ್ಟಾಗ್ರಾಮ್ ಚಿತ್ರ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಅ. 2ರಂದು ಬಿಡುಗಡೆಯಾಗಿ ದೇಶದಾದ್ಯಂತ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಹೊಂಬಾಳೆ ಫಿಲ್ಮ್ಸ್ ಹೊಸ ದಾಖಲೆ ನಿರ್ಮಿಸುತ್ತಿದೆ. ಈಗಾಗಲೇ ಘೋಷಣೆ ಮಾಡಿದಂತೆ 'ಕಾಂತಾರ ಚಾಪ್ಟರ್ 1' ಇಂಗ್ಲಿಷ್ ಭಾಷೆಯಲ್ಲಿ ಅಕ್ಟೋಬರ್ 31ರಿಂದ ಒಟಿಟಿ ವೇದಿಕೆಯಲ್ಲಿ ಪ್ರಸಾರ ಕಾಣಲಿದೆ. ಇದರ ಜೊತೆಗೆ ಸ್ಪ್ಯಾನಿಶ್ ಭಾಷೆಯಲ್ಲಿ ಕಾಂತಾರ ಚಾಪ್ಟರ್ 1 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ADVERTISEMENT

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸ್ಪ್ಯಾನಿಶ್ ಭಾಷೆಯ ಟ್ರೇಲರ್ ಹಂಚಿಕೊಂಡು ಅದರ ಜೊತೆಗೆ ‘ಭಾರತದಲ್ಲಿ ಪ್ರಾರಂಭವಾದ ಒಂದು ದೈವಿಕ ಸಾಹಸಗಾಥೆ. ಈಗ ಜಗತ್ತನ್ನೇ ಗೆಲ್ಲುತ್ತಿದೆ. ಅಕ್ಟೋಬರ್ 31ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಸ್ಪ್ಯಾನಿಶ್ ಭಾಷೆಯಲ್ಲಿ ಪ್ರಥಮ ಪ್ರದರ್ಶನಗೊಳ್ಳುತ್ತಿದೆ. ಕಾಂತಾರ ಚಾಪ್ಟರ್ 1 ಸ್ಪ್ಯಾನಿಶ್ ಭಾಷೆಯ ಟ್ರೇಲರ್ ಈಗ ಬಿಡುಗಡೆಯಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

ಇನ್ನು, ‘ಕಾಂತಾರ ಚಾಪ್ಟರ್ 1’ 2025ರಲ್ಲಿ ಅತೀ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾತ್ರವಲ್ಲ, ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ ₹818 ಕೋಟಿಗೂ ಅಧಿಕ ಹಣ ಸಂಪಾದಿಸಿದೆ. 'ಕಾಂತಾರ ಚಾಪ್ಟರ್ 1' 2025ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಕಾಂತಾರ ಸಿನಿಮಾವು ಕರ್ನಾಟಕ ರಾಜ್ಯವೊಂದರಲ್ಲೇ ₹250 ಕೋಟಿ ಗಳಿಕೆಯ ಗಡಿ ದಾಟಿದ ಮೊದಲ ಕನ್ನಡ ಚಲನಚಿತ್ರ ಎಂಬ ಐತಿಹಾಸಿಕ ದಾಖಲೆಯನ್ನು ಬರೆದಿದೆ. 'ಕಾಂತಾರ' ಚಿತ್ರವು ಕನ್ನಡ ನೆಲದ ಕಥೆ, ಸಂಸ್ಕೃತಿ ಮತ್ತು ನಂಬಿಕೆಯ ಕಥಾವಸ್ತುವನ್ನು ಹೊಂದಿದೆ. ಈ ಅಸಾಮಾನ್ಯ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮತ್ತು ಪ್ರಾದೇಶಿಕ ಚಲನಚಿತ್ರಗಳ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ. ಅಕ್ಟೋಬ‌ರ್ 31ರಿಂದ ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಸ್ಟ್ರೀಮಿಂಗ್ ಆಗಲಿದೆ. ಈ ಬಗ್ಗೆ ಅಮೆಜಾನ್ ಪ್ರೈಮ್ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.