ನಟ ರಿಷಬ್ ಶೆಟ್ಟಿ
ಚಿತ್ರ: ಇನ್‌ಸ್ಟಾಗ್ರಾಮ್
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1’ ಅ. 2ರಂದು ಅದ್ಧೂರಿಯಾಗಿ ತೆರೆಕಂಡಿತ್ತು. ಇದೀಗ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಮೊದಲ ವಾರದಲ್ಲೇ ₹509.25 ಕೋಟಿ ಗಳಿಕೆ ಮಾಡಿದೆ.
ಈ ಬಗ್ಗೆ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ. ಮೊದಲ ವಾರದ ದಾಖಲೆಯ ಗಳಿಕೆ ಪೋಸ್ಟ್ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್, ‘ಕಾಂತಾರ ಚಾಪ್ಟರ್ 1 ಮೊದಲ ವಾರದಲ್ಲಿ ವಿಶ್ವಾದ್ಯಂತ ₹509.25 ಕೋಟಿಯನ್ನು ದಾಟಿದೆ. ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ಹೆಚ್ಚಿನ ಗಳಿಕೆಯನ್ನು ಮುಂದುವರಿಸಲಿದೆ’ ಎಂದು ಬರೆದುಕೊಂಡಿದೆ.
ಸುಮಾರು 5000ಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನಗೊಂಡಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಕಣ್ಣುಂಬಿಕೊಂಡ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಅಷ್ಟೇ ಅಲ್ಲದೇ ಸಿನಿಮಾ ರಂಗದ ಪ್ರಮುಖರು ಹಾಡಿ ಹೊಳಿದ್ದರು. ಸದ್ಯ ಕಾಂತಾರಾ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಮೊದಲ ವಾರದಲ್ಲೇ ₹509.25 ಕೋಟಿ ಗಳಿಕೆ ಮಾಡಿದೆ.
ಇನ್ನು, ದೇಶದಾದ್ಯಂತ ಏಳು ಸಾವಿರಕ್ಕೂ ಅಧಿಕ ತೆರೆಗಳಲ್ಲಿ ಬಿಡುಗಡೆಯಾಗಿದ್ದ ‘ಕಾಂತಾರ ಚಾಪ್ಟರ್ 1’ ಸಿನಿಮಾ ಉತ್ತರ ಅಮೆರಿಕದಲ್ಲೇ ಸುಮಾರು ₹26 ಕೋಟಿಗೂ ಅಧಿಕ ಹಣ ಗಳಿಸಿದೆ. ಬಿಡುಗಡೆಯಾದ ದಿನವೇ ಈ ಸಿನಿಮಾದ 12 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿದ್ದವು. ಸಿನಿಮಾ ಬಿಡುಗಡೆಯಾಗಿ ವಾರ ಉರುಳಿದ್ದರೂ ಸಿನಿಮಾ ಪ್ರೇಕ್ಷಕರನ್ನು ಸೆಳೆಯುವುದು ನಿಂತಿಲ್ಲ. ಶುಕ್ರವಾರ(ಅ.10) ಬುಕ್‌ಮೈಶೋನಲ್ಲಿ ಪ್ರತಿ ಗಂಟೆಗೆ ಸುಮಾರು 30 ಸಾವಿರ ಟಿಕೆಟ್‌ಗಳ ಮಾರಾಟ ಕಂಡುಬಂತು. ಬೆಂಗಳೂರಿನಲ್ಲಿ ನೂರಕ್ಕೂ ಅಧಿಕ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.