ಚಿತ್ರ ಕೃಪೆ: Rekha Gupta
ದೆಹಲಿ: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ ಅಧ್ಯಾಯ–1‘ ಸಿನಿಮಾ ನೋಡಿ ಸಿನಿ ತಾರೆಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಚಿತ್ರತಂಡವನ್ನು ಭೇಟಿಯಾಗಿ ಸಿನಿಮಾದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿ ಸಿಎಂ ರೇಖಾ ಗುಪ್ತಾ, ಮುಖ್ಯಮಂತ್ರಿ ಜನಸೇವಾ ಸದನದಲ್ಲಿ ‘ಕಾಂತಾರ ಅಧ್ಯಾಯ-1‘ ಸಿನಿಮಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ಚಿತ್ರ ತಂಡವನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ.
ರೇಖಾ ಗುಪ್ತಾ ಸಿನಿಮಾ ಕುರಿತು ‘ಈ ಚಿತ್ರವು ಭಾರತದ ಆಧ್ಯಾತ್ಮಿಕ ಆಳ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸುಂದರವಾಗಿ ಪ್ರತಿಬಿಂಬಿಸುತ್ತದೆ. ಸಿನಿಮಾ ಮೂಲಕ ನಮ್ಮ ಸಂಪ್ರದಾಯಗಳ ಸಾರವನ್ನು ಜೀವಂತಗೊಳಿಸುತ್ತದೆ. ಕಾಂತಾರದಂತಹ ಚಲನಚಿತ್ರವು ನಮ್ಮ ಪರಂಪರೆಯ ಚೈತನ್ಯವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ಯುತ್ತವೆ‘ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಗಮನಾರ್ಹ ಸಿನಿ ಪ್ರಯಾಣದಲ್ಲಿ ಯಶಸ್ಸನ್ನು ಕಾಣಲೆಂದು ಇಡೀ ತಂಡಕ್ಕೆ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.