
ಕಾಂತಾರ ಅಧ್ಯಾಯ 1
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಅಧ್ಯಾಯ 1' ಅಕ್ಟೋಬರ್ 2ರಂದು ಜಾಗತಿಕವಾಗಿ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಕಾಂತಾರ ಅಧ್ಯಾಯ 1 ಬರೋಬ್ಬರಿ 50 ದಿನಗಳನ್ನು ಪೂರೈಸಿದೆ.
ಈ ವಿಚಾರವನ್ನು ನಟ ರಿಷಬ್ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಟಿಟಿಯಲ್ಲಿ ಬಿಡುಗಡೆಯಾದರೂ ಕೂಡ ಚಿತ್ರಮಂದಿರಗಳಲ್ಲಿ ಕಾಂತಾರ ಅಧ್ಯಾಯ 1 ಯಶಸ್ವಿಯಾಗಿ 50 ದಿನಗಳ ಕಾಲ ಪ್ರದರ್ಶನ ಕಂಡಿದೆ.
50 ದಿನಗಳನ್ನು ಪೂರೈಸಿದ ಖುಷಿಯಲ್ಲಿ ನಟ ರಿಷಬ್ ಶೆಟ್ಟಿ, ‘ನಮ್ಮ ಪರಂಪರೆ ಮತ್ತು ಪವಿತ್ರ ಸಂಪ್ರದಾಯಗಳಲ್ಲಿ ಬೇರೂರಿರುವ ದೈವಿಕ ಸಿನಿಮೀಯ ಅನುಭವ. ಪ್ರೀತಿ ಮತ್ತು ಬೆಂಬಲಕ್ಕಾಗಿ ಪ್ರಪಂಚದಾದ್ಯಂತ ಎಲ್ಲಾ ಪ್ರೇಕ್ಷಕರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿಮ್ಮ ಪ್ರೀತಿ ಈ ಪ್ರಯಾಣವನ್ನು ನಿಜವಾಗಿಯೂ ವಿಶೇಷವಾಗಿಸಿದೆ’ ಎಂದು ಬರೆದುಕೊಂಡಿದ್ದಾರೆ.
‘ಕಾಂತಾರ ಚಾಪ್ಟರ್ 1’ 2025ರಲ್ಲಿ ಅತೀ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 'ಕಾಂತಾರ' ಚಿತ್ರವು ಕನ್ನಡ ನೆಲದ ಕಥೆ, ಸಂಸ್ಕೃತಿ ಮತ್ತು ನಂಬಿಕೆಯನ್ನು ವಿಶ್ವದಾದ್ಯಂತ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿದೆ. ಈ ಅಸಾಮಾನ್ಯ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮತ್ತು ಪ್ರಾದೇಶಿಕ ಚಲನಚಿತ್ರಗಳ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.