
ನಟ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಅಧ್ಯಾಯ–1’ ರಲ್ಲಿ ರಾಜ ಕುಲಶೇಖರ ಪಾತ್ರದಲ್ಲಿ ಮಿಂಚಿದ್ದ ಗುಲ್ಶನ್ ದೇವಯ್ಯ ಅವರು ಕಾರ್ಯಕ್ರಮದಲ್ಲಿ ಪುಟ್ಟ ಬಾಲಕಿಯೊಂದಿಗೆ ಕುಣಿದು ಸಂಭ್ರಮಿಸಿದ್ದಾರೆ. ಇವರ ನೃತ್ಯಕ್ಕೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಗುಲ್ಶನ್ ದೇವಯ್ಯ ಅವರು ಕೊಡಗು ಮೂಲದವರು ಆಗಿದ್ದರೂ ಹೆಚ್ಚಾಗಿ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. 'ಉಲಜ್', ಚಿತ್ರ ಹಾಗೂ ‘ಬ್ಯಾಡ್ ಕಾಪ್’ ವೆಬ್‌ಸಿರೀಸ್‌ನಲ್ಲಿ ನಟಿಸಿದ್ದರು. ಕೆಲ ತಿಂಗಳ ಹಿಂದೆ ಬಿಡುಗಡೆಯಾದ ‘ಕಾಂತಾರ ಅಧ್ಯಾಯ–1’ರಲ್ಲಿ ರಾಜ ಕುಲಶೇಖರ ಪಾತ್ರದಲ್ಲಿ ನಟಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ.
ಹೊಂಬಾಳೆ ಫಿಲ್ಡ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾದ ಚಿತ್ರದಲ್ಲಿ ರಿಷಬ್ ಶೆಟ್ಟಿ, ರುಕ್ಕಿಣಿ ವಸಂತ್, ಗುಲ್ಕನ್ ದೇವಯ್ಯ ಸೇರಿ ಹಲವರು ಬಣ್ಣ ಹಚ್ಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.