ADVERTISEMENT

ಪತ್ನಿ ಜೊತೆ ಕಾಂತಾರ ಚಾಪ್ಟರ್–1 ಸಿನಿಮಾ ವೀಕ್ಷಿಸಿದ ಹೆಚ್‌ಡಿಕೆ: ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2025, 8:42 IST
Last Updated 8 ಅಕ್ಟೋಬರ್ 2025, 8:42 IST
<div class="paragraphs"><p>ಕಾಂತಾರ ಸಿನಿಮಾ ವೀಕ್ಷಿಸಿದ ಹೆಚ್‌ಡಿಕೆ&nbsp;</p></div>

ಕಾಂತಾರ ಸಿನಿಮಾ ವೀಕ್ಷಿಸಿದ ಹೆಚ್‌ಡಿಕೆ 

   

ಚಿತ್ರ ಕೃಪೆ: ಹೆಚ್‌.ಡಿ ಕುಮಾರಸ್ವಾಮಿ ಸಾಮಾಜಿಕ ಮಾಧ್ಯಮ

ದೆಹಲಿ: ರಿಷಬ್ ಶೆಟ್ಟಿ ನಟನೆಯ 'ಕಾಂತಾರ ಅಧ್ಯಾಯ–1' ಸಿನಿಮಾ ನೋಡಿ ಸಿನಿ ತಾರೆಯರು, ಅನೇಕ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರು ಕೂಡ ಪತ್ನಿ ಜೊತೆ ಸಿನಿಮಾ ವೀಕ್ಷಿಸಿದ್ದಾರೆ. ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ಕಾಂತಾರ ಸಿನಿಮಾ ವೀಕ್ಷಿಸಿ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಹೆಚ್‌.ಡಿ. ಕುಮಾರಸ್ವಾಮಿ, 'ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ಅನಾವರಣ' ಎಂದು ಬರೆದುಕೊಂಡಿದ್ದಾರೆ.

ಮುಂದುವರೆದು, 'ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ. ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು. ನಿರ್ದೇಶಕ ರಿಷಭ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಹೊಂಬಾಳೆ ಫಿಲ್ಮ್ಸ್ ಮತ್ತವರ ತಂಡದ ಪ್ರಯತ್ನಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮಿಂದ ಇನ್ನಷ್ಟು ಅತ್ಯುತ್ತಮ ಚಿತ್ರಗಳು ಮೂಡಿಬರಲಿ ಹಾಗೂ ಕನ್ನಡ ಚಿತ್ರರಂಗದಲ್ಲಿ ಇಂತಹ ಜಾಗತಿಕ ಮಟ್ಟದ ಚಿತ್ರಗಳು ಹೆಚ್ಚೆಚ್ಚು ಬರಲಿ ಎಂದು ಆಶಿಸುವೆ' ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.