
ಕಾಂತಾರ ಅಧ್ಯಾಯ 1
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಅಧ್ಯಾಯ 1' ಅಕ್ಟೋಬರ್ 2ರಂದು ಬಿಡುಗಡೆಯಾಗಿ ದೇಶದಾದ್ಯಂತ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಈ ಸಿನಿಮಾ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಜೊತೆಗೆ ‘ಅತ್ಯುತ್ತಮ ಚಿತ್ರ’ ಸ್ಪರ್ಧೆಯ ರೇಸ್‌ಗೆ ಪ್ರವೇಶ ಪಡೆದಿದೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೊಂಬಾಳೆ ಫಿಲ್ಮ್ಸ್ ಮಾಹಿತಿ ನೀಡಿದೆ. ‘ನಮ್ಮ ಸಂಸ್ಕೃತಿಯಲ್ಲಿ ಬೇರೂರಿರುವ, ದೈವತ್ವದಿಂದ ನಡೆಸಲ್ಪಟ್ಟ, ‘ಕಾಂತಾರ ಅಧ್ಯಾಯ 1’ 2026ನೇ ಸಾಲಿನ ಆಸ್ಕರ್ ಅಕಾಡೆಮಿ ಪ್ರಶಸ್ತಿಗೆ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಓಟದಲ್ಲಿದೆ. ಇದು ಹೆಮ್ಮೆಯ ವಿಚಾರ’ ಎಂದು ಬರೆದುಕೊಂಡಿದೆ.
‘ಕಾಂತಾರ ಚಾಪ್ಟರ್ 1’ 2025ರಲ್ಲಿ ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾತ್ರವಲ್ಲ, ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ ₹818 ಕೋಟಿಗೂ ಅಧಿಕ ಹಣ ಸಂಪಾದಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.