ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ
ಚಿತ್ರ: pragathirishabshetty
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1 ಅ.2ರಂದು ಅದ್ಧೂರಿಯಾಗಿ ತೆರೆಕಂಡಿದೆ. ಕಾಂತಾರ ಸಿನಿಮಾ ಚಿತ್ರಮಂದಿರಗಳತ್ತ ಪ‍್ರೇಕ್ಷಕರನ್ನು ಸೆಳೆಯುತ್ತಿದೆ.
ಈಗಾಗಲೇ ‘ಬುಕ್‌ಮೈ ಶೋ’ ಆ್ಯಪ್ ಮೂಲಕವೇ 50 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿವೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಇನ್ನು, ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಪ್ರತಿಯೊಬ್ಬರ ಅಭಿನಯ, ವೇಷಭೂಷಣ ಪ್ರೇಕ್ಷಕರಿಗೆ ಇಷ್ಟವಾಗಿದೆ.
ಕಾಂತಾರ ಸಿನಿಮಾದಲ್ಲಿ ಕನಕವತಿ ಪಾತ್ರದಲ್ಲಿ ಅಭಿನಯಿಸಿ ರುಕ್ಮಿಣಿ ವಸಂತ್ ಅವರ ವೇಷಭೂಷಣದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ನಡೆಯುತ್ತಲೇ ಇದೆ. ಇನ್ನು, ತೆರೆಮೇಲೆ ಇಡೀ ಕಾಂತಾರ ತಂಡ ಅಷ್ಟು ಸುಂದರವಾಗಿ ಕಾಣೋದಕ್ಕೆ ಮುಖ್ಯ ಕಾರಣ ರಿಷಬ್ ಶೆಟ್ಟಿ ಪತ್ನಿ.
ಹೌದು, ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕಾಂತಾರ ಚಾಪ್ಟರ್ 1 ಸಿನಿಮಾದ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ. ಪ್ರತಿಯೊಂದು ಪಾತ್ರಗಳಿಗೂ ಅದ್ಭುತವಾಗಿ ವಸ್ತ್ರ ವಿನ್ಯಾಸ ಮಾಡಿ, ಪಾತ್ರಧಾರಿಗಳು ತೆರೆ ಮೇಲೆ ಕಂಗೊಳಿಸುವಂತೆ ಮಾಡಿದ್ದಾರೆ.
ಇನ್ನು, ಕಾಂತಾರ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಪ್ರಗತಿ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಆ ಫೋಟೊಗಳ ಜೊತೆಗೆ 'ಕಾಂತಾರ ಅಧ್ಯಾಯ 1ರ ಭಾಗವಾಗಿರುವುದು ನಿಜಕ್ಕೂ ಮರೆಯಲಾಗದ ಪ್ರಯಾಣ. ತುಂಬಾ ಬೇರೂರಿರುವ, ನೈಜ ಮತ್ತು ದೈವಿಕವಾಗಿರುವ ಒಂದು ಕಥೆಗೆ ವೇಷಭೂಷಣಗಳನ್ನು ವಿನ್ಯಾಸಗೊಳಿಸುವುದು, ಅದು ಒಂದು ಭಾವನೆಯಾಗಿತ್ತು. ಈ ಭವ್ಯವಾದ ಸಿನಿಮಾದ ಒಂದು ಸಣ್ಣ ಭಾಗವನ್ನು ಹೆಣೆದಿದ್ದಕ್ಕಾಗಿ ಕೃತಜ್ಞಳಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಹಂಚಿಕೊಂಡ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ಫೋಟೊಗಳನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.