ಚಿತ್ರ ಕೃಪೆ: Rishab Shetty
ಬಹುನಿರೀಕ್ಷಿತ ಕಾಂತಾರ ಅಧ್ಯಾಯ–1 ನಿನ್ನೆ (ಗುರುವಾರ) ವಿಶ್ವದಾದ್ಯಂತ ಬಿಡುಗಡೆಗೊಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಚಿತ್ರವನ್ನು ಪೈರಸಿ ಮಾಡುತ್ತಿದ್ದು, ಈ ಬಗ್ಗೆ ರಿಷಬ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂತಾರ ಕೇವಲ ಒಂದು ಸಿನಿಮಾ ಅಲ್ಲ, ಅದು ನಮ್ಮ ಸಂಸ್ಕೃತಿ, ನಮ್ಮ ನೆಲದ ಕಥೆ. ಆರಂಭದಿಂದಲೂ ಈ ಪಯಣದಲ್ಲಿ ನಮ್ಮ ಜತೆ ನೀವು ಇದ್ದೀರ. ನಿಮ್ಮ ಅಪಾರ ಪ್ರೀತಿ, ಬೆಂಬಲವೇ ಈ ಚಿತ್ರವನ್ನು ಇಷ್ಟು ಎತ್ತರಕ್ಕೆ ಕೊಂಡೊಯ್ದಿದೆ. ಆ ಋಣ ಯಾವಾಗಲೂ ನಮ್ಮ ಮೇಲಿರುತ್ತದೆ ಎಂದಿದ್ದಾರೆ.
ನಮ್ಮದೊಂದು ವಿನಂತಿ, ‘ಈ ಚಿತ್ರದಲ್ಲಿ ತೆರೆಯ ಮೇಲೆ, ತೆರೆಯ ಹಿಂದೆ ಸಾವಿರಾರು ಜನರ ಕನಸು ಹಾಗೂ ಶ್ರಮ ಇದೆ. ಪೈರಸಿಯಿಂದ ಈ ಕನಸನ್ನು ಹಾಳು ಮಾಡಬೇಡಿ. ದಯವಿಟ್ಟು ಚಿತ್ರಮಂದಿರಗಳಲ್ಲಿ ಯಾವುದೇ ಚಿತ್ರದ ದೃಶ್ಯವನ್ನು ಚಿತ್ರೀಕರಿಸಬೇಡಿ ಅಥವಾ ಹಂಚಿಕೊಳ್ಳಬೇಡಿ. ಸಣ್ಣ ವಿಡಿಯೊ ತುಣುಕು ಸಿನಿಮಾದ ಅಸಲಿ ಮಾಯೆಯನ್ನು ಹಾಳುಗೆಡವುತ್ತದೆ ಎಂದು ಬರೆದುಕೊಂಡಿದ್ದಾರೆ.
ಈ ಸಂಭ್ರಮ ದೊಡ್ಡ ಪರದೆಯಲ್ಲಿಯೇ ಇರಲಿ. ಈ ಅದ್ಭುತ ಪ್ರಯಾಣವನ್ನು ಒಟ್ಟಾಗಿ ಕಾಪಾಡೋಣ. ಕಾಂತಾರದ ಅನುಭವ ಎಂದೆಂದಿಗೂ ಚಿತ್ರಮಂದಿರಕ್ಕೆ ಮೀಸಲಾಗಲಿ ಎಂದು ರಿಷಬ್ ಶೆಟ್ಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.