ADVERTISEMENT

'ಕಾಂತಾರ ಅಧ್ಯಾಯ–1' ಸಿನಿಮಾ ಯಶಸ್ಸು: ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಅಕ್ಟೋಬರ್ 2025, 5:49 IST
Last Updated 7 ಅಕ್ಟೋಬರ್ 2025, 5:49 IST
<div class="paragraphs"><p>ಚಿತ್ರ ಕೃಪೆ: Prakash Raj</p></div>

ಚಿತ್ರ ಕೃಪೆ: Prakash Raj

   

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ ಅಧ್ಯಾಯ–1‘ ವಿಶ್ವದಾದಂತ್ಯ ಬಿಡುಗಡೆಯಾಗಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಅನೇಕ ಸ್ಟಾರ್ ನಟರು, ನಿರ್ದೇಶಕರುಗಳು ಸಿನಿಮಾದ ಕುರಿತು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸಿನಿಮಾದ ಕುರಿತು ನಟ ಪ್ರಕಾಶ್ ರಾಜ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ‘ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು. ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು ಮತ್ತು ಕನ್ನಡ ಸಿನಿಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ‘ ಎಂದು ಬರೆದುಕೊಂಡಿದ್ದಾರೆ.

ADVERTISEMENT

‘ಕಾಂತಾರ ಅಧ್ಯಾಯ–1‘ ಬಿಡುಗಡೆಯಾಗಿ 5 ದಿನ ಕಳೆದರೂ ಸಿನಿಮಾದ ಕುರಿತು ಪ್ರೇಕ್ಷಕರಲ್ಲಿ ಮಾತ್ರವಲ್ಲ ದೊಡ್ಡ ಸ್ಟಾರ್‌ಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ರಾಕೇಶ್ ಪೂಜಾರಿ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.